Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯವಂತ ಸಮಾಜ ನಿರ್ಮಿಸಿ : ತುರುವನೂರು ಪೊಲೀಸ್ ಠಾಣೆ ಎಎಸ್‍ಐ ರಮೇಶ್

---Advertisement---

ಚಿತ್ರದುರ್ಗ. ಜೂನ್. 30: ಮಾದಕ ವ್ಯಸನಿಗಳಾಗದೆ ಪ್ರತಿಯೊಬ್ಬರೂ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಪಣ ತೊಡಬೇಕು ಎಂದು ತುರುವನೂರು ಪೊಲೀಸ್ ಠಾಣೆಯ ಸಹಾಯಕ  ಪೊಲೀಸ್   ನಿರೀಕ್ಷಕರಾದ ರಮೇಶ್ ತಿಳಿಸಿದರು.

ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಯ ಕೂನಬೇವು ಸರ್ಕಾರಿ ಪ್ರೌಢಶಾಲೆಯಲ್ಲಿ ತುರುವನೂರು ಪೊಲೀಸ್ ಠಾಣೆಯ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ‘ಅಂತರರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಸಾಗಾಣಿಕೆ ವಿರೋಧಿ ದಿನ-2026′ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೆಲವು ವಸ್ತುಗಳನ್ನು ಪದೇ ಪದೇ ಬಳಸುವುದರಿಂದ ಮಾದಕತೆ ಉಂಟಾಗುತ್ತಾ ಹೋಗುತ್ತದೆ. ಅದನ್ನು ನಿರಂತರವಾಗಿ ಬಳಸುವುದರಿಂದ ಮೆದುಳು ನಿಷ್ಕ್ರಿಯವಾಗುತ್ತಾ ಸಾಗುತ್ತದೆ ಎಂದು ಅವರು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಎಚ್ಚರಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯೋಪಾಧ್ಯಾಯರಾದ ಹನುಮಂತಪ್ಪ, ನಗರಗಳಲ್ಲಿ ಶ್ರೀಮಂತ ಮಕ್ಕಳು ಮಾದಕ ವಸ್ತುಗಳನ್ನು ಬಳಸಿ ತಮ್ಮ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಯುವಜನತೆ ದೇಶದ ಆಸ್ತಿಯಾಗಬೇಕೇ ಹೊರತು ದುಶ್ಚಟಗಳ ದಾಸರಾಗಬಾರದು. ಮಾದಕ ವಸ್ತುಗಳ ಮಾರಾಟ ಮತ್ತು ಸಾಗಣೆ ಮಾಡುವುದು ಕಾನೂನುಬಾಹಿರ ಹಾಗೂ ಅಪರಾಧವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಲೆಯ ಸಹ ಶಿಕ್ಷಕರಾದ ಕೃಷ್ಣ, ಮಾರುತಿಪ್ರಸಾದ್, ಷರೀಫ್, ಪ್ರಶಾಂತ್‍ಕುಮಾರಿ, ರಾಧಾಮಣಿ, ವೀಣಾ ಹಾಗೂ ದ್ವಿತೀಯ ದರ್ಜೆ ಸಹಾಯಕ ನೋಬೆಲ್ ಕುಮಾರ್, ತುರುವನೂರು ಪೊಲೀಸ್ ಠಾಣೆಯ ಸಿಬ್ಬಂದಿಯಾದ ಮೋಹನ್ ಕುಮಾರ್ ಮತ್ತು ನೂರ್ ಅಹಮದ್ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now