Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ!

---Advertisement---

ಬೆಂಗಳೂರು.ಜುಲೈ.01: ರಾಜ್ಯದಲ್ಲಿ ಮಂದಗತಿಯಲ್ಲಿದ್ದ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.
ವಿಶೇಷವಾಗಿ ಜುಲೈ 1ರಿಂದ ಕರಾವಳಿ ತೀರದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಮುಂಜಾಗ್ರತಾ ಕ್ರಮವಾಗಿ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಭಾಗದಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಗುಡುಗು-ಮಿಂಚಿನ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ನದಿ ಹಾಗೂ ಹಳ್ಳ-ಕೊಳ್ಳಗಳು ತುಂಬಿ ಹರಿಯುವ ಭೀತಿ ಇರುವುದರಿಂದ ತಗ್ಗು ಪ್ರದೇಶದ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳಲು ಮತ್ತು ಎಚ್ಚರಿಕೆಯಿಂದ ಇರಲು ಜಿಲ್ಲಾಡಳಿತಗಳು ಸೂಚಿಸಿವೆ. ಅಲ್ಲದೆ, ಕಡಲು ಪ್ರಕ್ಷುಬ್ಧಗೊಳ್ಳುವ ಮುನ್ಸೂಚನೆ ಇರುವುದರಿಂದ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.

ಮಲೆನಾಡು ಮತ್ತು ಒಳನಾಡಿನ ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಮುಂದುವರಿಯಲಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಇನ್ನು ಕೊಡಗು, ಮಂಡ್ಯ, ತುಮಕೂರು ಸೇರಿದಂತೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಉಳಿದ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

Join WhatsApp

Join Now

Join Telegram

Join Now