Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವೈದ್ಯರು ದೇಶದ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು; ರಾಷ್ಟ್ರೀಯ ವೈದ್ಯರ ದಿನಕ್ಕೆ ಪ್ರಧಾನಿ ಮೋದಿ ಶುಭಾಶಯ

---Advertisement---

ದೆಹಲಿ ಜುಲೈ.01 : ರಾಷ್ಟ್ರೀಯ ವೈದ್ಯರ ದಿನದ (ಜುಲೈ 1) ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದಾದ್ಯಂತ ಇರುವ ವೈದ್ಯ ಸಮುದಾಯಕ್ಕೆ ಶುಭ ಕೋರಿದ್ದಾರೆ. ಸಮಾಜಕ್ಕೆ ವೈದ್ಯರು ನೀಡುತ್ತಿರುವ ಅಮೂಲ್ಯ ಕೊಡುಗೆ ಮತ್ತು ಅವರ ನಿಸ್ವಾರ್ಥ ಸೇವೆಯನ್ನು ಪ್ರಧಾನಿ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್ (ಟ್ವಿಟರ್) ನಲ್ಲಿ ಈ ಕುರಿತು ಸಂದೇಶ ಹಂಚಿಕೊಂಡಿರುವ ಪ್ರಧಾನಿ, “ವೈದ್ಯರು ನಮ್ಮ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು” ಎಂದು ಬಣ್ಣಿಸಿದ್ದಾರೆ. ಅತ್ಯಂತ ಕಠಿಣ ಸಂದರ್ಭಗಳಲ್ಲೂ ವೈದ್ಯರು ತೋರುವ ದಣಿವರಿಯದ ಪರಿಶ್ರಮ, ಸಹಾನುಭೂತಿ ಮತ್ತು ಬದ್ಧತೆ ಕೋಟ್ಯಂತರ ಜನರ ವಿಶ್ವಾಸ ಹಾಗೂ ಕೃತಜ್ಞತೆಗೆ ಪಾತ್ರವಾಗಿದೆ ಎಂದು ಅವರು ಹೇಳಿದ್ದಾರೆ.

ಕಳೆದ ಒಂದು ದಶಕದಲ್ಲಿ ಭಾರತದ ಆರೋಗ್ಯ ರಂಗದಲ್ಲಿ ಆಗಿರುವ ಸುಧಾರಣೆಗಳ ಬಗ್ಗೆಯೂ ಪ್ರಧಾನಿ ಮೋದಿ ಬೆಳಕು ಚೆಲ್ಲಿದ್ದಾರೆ.ಕಳೆದ ಹತ್ತು ವರ್ಷಗಳಲ್ಲಿ ದೇಶದಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ ದುಪ್ಪಟ್ಟಾಗಿದೆ. ವೈದ್ಯಕೀಯ ಪದವಿ (UG) ಮತ್ತು ಸ್ನಾತಕೋತ್ತರ (PG) ಸೀಟುಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿದೆ. ಈ ಅಭೂತಪೂರ್ವ ಬೆಳವಣಿಗೆಯು ವೈದ್ಯರಾಗಲು ಬಯಸುವ ಯುವಕರಿಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸುತ್ತಿದ್ದು, ದೇಶದ ಮೂಲೆ ಮೂಲೆಗೂ ಗುಣಮಟ್ಟದ ವೈದ್ಯಕೀಯ ಸೇವೆ ತಲುಪಲು ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.

Join WhatsApp

Join Now

Join Telegram

Join Now