Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಗಾಕಾಂಕ್ಷಿಗಳಿಗೆ ಶುಭಸುದ್ದಿ; ಇಂದಿನಿಂದ 6,715 ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ

---Advertisement---

ದೆಹಲಿ.ಜುಲೈ.01: ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನಲ್ ಸೆಲೆಕ್ಷನ್ (IBPS) ವತಿಯಿಂದ ಪ್ರೊಬೇಷನರಿ ಆಫೀಸರ್ ಮತ್ತು ಮ್ಯಾನೇಜ್ ಮೆಂಟ್ ಟ್ರೈನಿ ಹುದ್ದೆಗಳ ಬೃಹತ್ ನೇಮಕಾತಿ ಪ್ರಕ್ರಿಯೆ ಇಂದಿನಿಂದ ಅಧಿಕೃತವಾಗಿ ಚಾಲನೆ ಪಡೆದಿದೆ. ದೇಶದ ಪ್ರತಿಷ್ಠಿತ ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದ್ದು, ಒಟ್ಟು 6,715 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬ್ಯಾಂಕ್ ಆಫ್ ಬರೋಡಾ ಸೇರಿದಂತೆ ದೇಶದ ಪ್ರಮುಖ ಬ್ಯಾಂಕ್ಗಳಾದ ಕೆನರಾ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಮಹಾರಾಷ್ಟ್ರ ಮುಂತಾದ ಸಂಸ್ಥೆಗಳಲ್ಲಿ ಈ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿರುವ ಯುವಕ-ಯುವತಿಯರು ಈ ಹುದ್ದೆಗಳಿಗೆ ಸ್ಪರ್ಧಿಸಬಹುದಾಗಿದೆ.

ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 30 ವರ್ಷದ ಒಳಗಿರಬೇಕು. ಸರ್ಕಾರದ ನಿಯಮಾವಳಿಗಳ ಪ್ರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ದಿವ್ಯಾಂಗ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಸಡಿಲಿಕೆಯನ್ನು ಕಲ್ಪಿಸಲಾಗಿದೆ.

ಈ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 1, 2026 ರಿಂದ ಲಿಂಕ್ ಮುಕ್ತವಾಗಿದ್ದು, ಜುಲೈ 21, 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ಶುಲ್ಕದ ವಿವರ ನೋಡುವುದಾದರೆ, ಸಾಮಾನ್ಯ ಮತ್ತು ಇತರೆ ವರ್ಗದ ಅಭ್ಯರ್ಥಿಗಳಿಗೆ ₹850 ನಿಗದಿಪಡಿಸಲಾಗಿದ್ದು, ಎಸ್ಸಿ, ಎಸ್ಟಿ ಮತ್ತು ದಿವ್ಯಾಂಗ ಅಭ್ಯರ್ಥಿಗಳಿಗೆ ₹175 ಶುಲ್ಕ ನಿಗದಿ ಮಾಡಲಾಗಿದೆ.
ಅರ್ಹ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಆನ್ಲೈನ್ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಅಂತಿಮವಾಗಿ ಸಂದರ್ಶನದ (ಪರ್ಸನಾಲಿಟಿ ಟೆಸ್ಟ್) ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತರು ಹೆಚ್ಚಿನ ವಿವರಗಳಿಗಾಗಿ ಐಬಿಪಿಎಸ್ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಧಿಸೂಚನೆಯನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಬಹುದು.

Join WhatsApp

Join Now

Join Telegram

Join Now