Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಅರಣ್ಯಾಧಿಕಾರಿ ವೆಂಕಟೇಶ್ ಸಾವು

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 01 : ನಗರದ ಜೋಗಿಮಟ್ಟಿ ರಸ್ತೆಯಲ್ಲಿ ವಾಸವಿದ್ದ ಹಾಗೂ ಹಿರಿಯೂರು ತಾಲೂಕಿನ ಉಪ ವಲಯ ಅರಣ್ಯಾಧಿಕಾರಿ (ಡಿಆರ್‌ಎಫ್‌ಒ) ವೆಂಕಟೇಶ್ (37 ವರ್ಷ) ಅವರು ನಿನ್ನೆ (ಜೂನ್‌.30, ಮಂಗಳವಾರ) ರಾತ್ರಿ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.

ಸುರಪುರ ಮೂಲದವರಾದ ವೆಂಕಟೇಶ್ ಅವರು ನಿನ್ನೆ ರಾತ್ರಿ ತಮ್ಮ ನಿವಾಸದಲ್ಲಿದ್ದ ವೇಳೆ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಚಿಕಿತ್ಸೆ ನೀಡಲು ಪ್ರಯತ್ನಿಸಿದರೂ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಕುಟುಂಬದವರನ್ನು ಅಗಲಿದ್ದಾರೆ.
ಘಟನೆ ಸಂಬಂಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಸಹಜ ಸಾವು ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಅಂತ್ಯಕ್ರಿಯೆ ಅವರ ಸ್ವಂತ ಊರಾದ ಸುರಪುರದಲ್ಲಿ ಇಂದು ನೆರವೇರಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now