Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ರಾಹಕರ ಗಮನಕ್ಕೆ: ಜುಲೈ ತಿಂಗಳಲ್ಲಿ ನಿಯಮಿತ ವಿದ್ಯುತ್ ಮೀಟರ್ ರೀಡಿಂಗ್ ಇರುವುದಿಲ್ಲ!

---Advertisement---

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಗ್ರಾಹಕರಿಗೆ ಪ್ರಮುಖ ಪ್ರಕಟಣೆಯೊಂದನ್ನು ಹೊರಡಿಸಿದೆ. ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನಾ ಕಾರ್ಯಕ್ಕಾಗಿ ಬೆಸ್ಕಾಂ ಮೀಟರ್ ರೀಡರ್ಗಳನ್ನು ನಿಯೋಜಿಸಿರುವುದರಿಂದ, ಪ್ರಸಕ್ತ ಜುಲೈ 2026ರ ತಿಂಗಳಲ್ಲಿ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ ಎಂದು ಸಂಸ್ಥೆ ತಿಳಿಸಿದೆ.

ನಿಯಮಿತ ಮೀಟರ್ ರೀಡಿಂಗ್ ಇಲ್ಲದಿರುವ ಕಾರಣ, ಈ ತಿಂಗಳು ಗ್ರಾಹಕರಿಗೆ ಸರಾಸರಿ ಬಿಲ್ ನೀಡಲಾಗುತ್ತದೆ. ಗ್ರಾಹಕರು ಕಳೆದ 3 ತಿಂಗಳಲ್ಲಿ ಬಳಸಿರುವ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ಅನ್ನು ಸಿದ್ಧಪಡಿಸಲಾಗುವುದು ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

ಯಾರಿಗೆ ಈ ನಿಯಮ ಅನ್ವಯಿಸುವುದಿಲ್ಲ?
ಕೆಲವು ನಿರ್ದಿಷ್ಟ ವರ್ಗದ ಗ್ರಾಹಕರಿಗೆ ಈ ತಾತ್ಕಾಲಿಕ ನಿಯಮದಿಂದ ವಿನಾಯಿತಿ ನೀಡಲಾಗಿದ್ದು, ಅವರಿಗೆ ಎಂದಿನಂತೆ ನಿಯಮಿತ ಮೀಟರ್ ರೀಡಿಂಗ್ ಮಾಡಲಾಗುತ್ತದೆ.
ಹೆಚ್.ಟಿ (HT) ಗ್ರಾಹಕರು.
40 ಹೆಚ್.ಪಿ (HP) ಮತ್ತು ಅದಕ್ಕಿಂತ ಹೆಚ್ಚಿನ ಲೋಡ್ ಹೊಂದಿರುವ ಎಲ್.ಟಿ (LT) ಗ್ರಾಹಕರು.
ಸೋಲಾರ್ ರೂಫ್ಟಾಪ್ (SRTPV) ಗ್ರಾಹಕರು.
ತಾತ್ಕಾಲಿಕ ವಿದ್ಯುತ್ ಸಂಪರ್ಕ ಹೊಂದಿರುವವರು.
ಗೃಹ ಜ್ಯೋತಿ ಯೋಜನೆಯ ಪರಿಶೀಲನಾ ಕಾರ್ಯವನ್ನು ಯಶಸ್ವಿಗೊಳಿಸಲು ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಕೋರಿದೆ.

Join WhatsApp

Join Now

Join Telegram

Join Now