ಚಿತ್ರದುರ್ಗ. ಜುಲೈ. 02: ರಾಜ್ಯ ಸರ್ಕಾರದ ನಿರ್ದೇಶನದಂತೆ ಚಿತ್ರದುರ್ಗ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಯಲ್ಲಿ ‘ಗೃಹ ಜ್ಯೋತಿ’ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನಾ ಕಾರ್ಯ ಹಾಗೂ ಸಮೀಕ್ಷೆ ಜುಲೈ 1ರಿಂದ ಆರಂಭವಾಗಿದೆ.
ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಒಳಪಡುವ ಪಂಡರಹಳ್ಳಿ, ತುರುವನೂರು, ಹಿರೇಗುಂಟನೂರು, ಭೀಮಸಮುದ್ರ, ಭರಮಸಾಗರ ಮತ್ತು ಸಿರಿಗೆರೆ ಶಾಖಾ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಯಲಿದೆ. ಬೆಸ್ಕಾಂ ನೌಕರರು, ಮೀಟರ್ ರೀಡರ್ಗಳು ಹಾಗೂ ಗ್ರಾಮ ವಿದ್ಯುತ್ ಪ್ರತಿನಿಧಿಗಳು ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿ ವಿವರಗಳನ್ನು ಪರಿಶೀಲಿಸಲಿದ್ದಾರೆ.
ಬೆಸ್ಕಾಂ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿದಾಗ ಸಾರ್ವಜನಿಕರು ಆಧಾರ್ ಕಾರ್ಡ್ ಪ್ರತಿ, ಭಾವಚಿತ್ರ , ಪಾನ್ ಕಾರ್ಡ್, ವೋಟರ್ ಐಡಿ, ರೇಷನ್ ಕಾರ್ಡ್, ಹಾಗೂ ಜಾತಿ ಪ್ರಮಾಣ ಪತ್ರದೊಂದಿಗೆ ಸಮೀಕ್ಷೆಗೆ ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಸಂಬಂಧಪಟ್ಟ ಶಾಖಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು ಭರಮಸಾಗರ-9449876302, ಸಿರಿಗೆರೆ-9449246642, ಹಿರೇಗುಂಟನೂರು-9449876261, ಭೀಮಸಮುದ್ರ-94499876252, ಪಂಡರಹಳ್ಳಿ-9449246642 ಹಾಗೂ ತುರುವನೂರು ಶಾಖೆಗೆ 6360140436 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.




















