Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

​‘ಡೆಡ್‌ಲೈನ್’ ಕಥೆಗೆ ರಾಜ್ಯ ಮಟ್ಟದ ಪ್ರಶಸ್ತಿ: ಪತ್ರಕರ್ತ ಕೆ.ಪಿ.ಓಂಕಾರಮೂರ್ತಿಗೆ ಕರುನಾಡ ವಿಜಯಸೇನೆಯಿಂದ ಸನ್ಮಾನ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 03 : ರಾಜ್ಯ ಮಟ್ಟದ ಕಥಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿದ ಪ್ರಜಾವಾಣಿಯ ಸಹಾಯಕ ವರದಿಗಾರ ಕೆ.ಪಿ.ಓಂಕಾರಮೂರ್ತಿ ಅವರನ್ನು ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕರುನಾಡ ವಿಜಯಸೇನೆಯಿಂದ ಸನ್ಮಾನಿಸಲಾಯಿತು.

ರಾಯಚೂರು ರಿಪೋರ್ಟ್ರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವದ ಪ್ರಯುಕ್ತ ಆಯೋಜಿಸಿದ್ದ ಕಥೆ, ಕವನ ಸ್ಪರ್ಧೆಯ ಕಥಾ ವಿಭಾಗದಲ್ಲಿ ಕೆ.ಪಿ.ಓಂಕಾರಮೂರ್ತಿ ಅವರ ‘ಡೆಡ್‌ಲೈನ್’ ಕಥೆಗೆ ಪ್ರಥಮ ಬಹುಮಾನ ಬಂದಿರುವುದು ಜಿಲ್ಲೆಗೆ ಹೆಮ್ಮೆತರುವ ಸಂಗತಿ. ಇದು ಅನೇಕರಿಗೆ ಸ್ಫೂರ್ತಿ ಆಗಬೇಕು. ಪತ್ರಕರ್ತನಲ್ಲಿದ್ದ ಕತೆಗಾರರನ್ನು ಗುರುತಿಸಿದ ರಾಯಚೂರು ರಿಪೋರ್ಟ್ರ್ಸ್ ಗಿಲ್ಡ್ ಕಾರ್ಯ ಶ್ಲಾಘನೀಯ ಎಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ತಿಳಿಸಿದರು.

ಈ ವೇಳೆ ಹಿರಿಯ ಪತ್ರಕರ್ತರಾದ ಚಳ್ಳಕೆರೆ ಬಸವರಾಜ್, ಈ.ಮಹೇಶ್ ಬಾಬು, ಡಿ.ಕುಮಾರಸ್ವಾಮಿ, ವಿ.ಚಂದ್ರಪ್ಪ, ಸಾಕ್ಷಿ ವೆಂಕಟೇಶ್, ಹನುಮಂತರಾಜು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now