ಸುದ್ದಿಒನ್, ಚಿತ್ರದುರ್ಗ, ಜುಲೈ. 04 : ನಗರದ ಪ್ರತಿಷ್ಠಿತ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ 2026 ನಡೆಯಿತು.
ಶಾಲೆಯಲ್ಲಿ ವಿದ್ಯಾರ್ಥಿ ಗಳು ವಿವಿಧ ಹುದ್ದೆ ಗಳಿಗೆ ನಾಮಪತ್ರ ಸಲ್ಲಿಕೆ, ನಾಮಪತ್ರಗಳ ಪರಿಶೀಲನೆ, ಮತದಾನ ಮುಂತಾದ ಚುನಾವಣೆ ಹಂತಗಳನ್ನು ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ಅಚ್ಚು ಕಟ್ಟಾಗಿ ಪರಿಚಯ ಪ್ರಾಯೋಗಿಕವಾಗಿ ಪರಿಚಯಿಸಲಾಯಿತು. ವಿದ್ಯಾರ್ಥಿಗಳು ಮತದಾನ ಮಾಡುವ ಸಂದರ್ಭದಲ್ಲಿ ಶಾಲಾ ಐಡಿ ಕಾರ್ಡ್ ಗುರುತಿನ ಚೀಟಿಯಾಗಿ ಬಳಸಲಾಯಿತು. ನಮ್ಮ ಸಂವಿಧಾನದ ಪ್ರಕಾರ ಚುನಾವಣೆ ಯಾವರೀತಿ ನಡೆಯುತ್ತದೆ ಎಂಬುದನ್ನು ಶಾಲಾ ಹಂತ ದಲ್ಲಿ ಪರಿಚಯ ಮಾಡಿಕೊಡಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀಮತಿ ಚಂದ್ರಕಲಾ ಚಂದ್ರಪ್ಪ, ಮುಖ್ಯ ಕಾರ್ಯ ನಿರ್ವಣಾಧಿಕಾರಿಯವರಾದ ರಘುಚಂದನ್, ಶಾಲೆಯ ಡೀನ್ ಆದ ಅನಂತ ರಾಮ್, ಶೈಕ್ಷಣಿಕ ನಿರ್ದೇಶಕರಾದ ಸಂಪತ್ ಕುಮಾರ್ ಸಿ ಡಿ, ಪ್ರಾoಶುಪಾಲರಾದ ಪಿ.ಬಸವರಾಜಯ್ಯ, ಮುಖ್ಯ ಶಿಕ್ಷಕರಾದ ಜಾರೀನಾ, ಪಿ ಆರ್ ಓ ರವಿಕುಮಾರ್ ಮತ್ತು ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರ ವರ್ಗದವರು ಹಾಜರಿದ್ದರು.


















