Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ಟಿ.ರಘುಮೂರ್ತಿರವರಿಗೆ ಸಚಿವ ಸ್ಥಾನ ನೀಡಿ : ಕೆ.ಟಿ.ಶಿವಕುಮಾರ್ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 05 : ಅಭಿವೃದ್ದಿಯ ಹರಿಕಾರ ಹ್ಯಾಟ್ರಿಕ್ ಹೀರೋ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿರವರಿಗೆ ಸಚಿವ ಸ್ಥಾನ ನೀಡುವಂತೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
ಅವರಿಗೆ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಶನಿವಾರ ಮನವಿ ಸಲ್ಲಿಸಿದರು.

ಉಪ ಮುಖ್ಯಮಂತ್ರಿಯಾದ ಮೇಲೆ ಪ್ರಥಮ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸಿದ್ದ ಡಾ.ಜಿ.ಪರಮೇಶ್ವರ್‍ರವರಿಗೆ ಮನವಿ ಸಲ್ಲಿಸಿದ ಕೆ.ಟಿ.ಶಿವಕುಮಾರ್ ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಜಿಲ್ಲೆಗೆ ಮೆಡಿಕಲ್ ಕಾಲೇಜು ಹೋರಾಟಕ್ಕಾಗಿ ಶಾಸಕ ಟಿ.ರಘುಮೂರ್ತಿರವರ ಕೊಡುಗೆ ಅಪಾರವಾಗಿದೆ. ಅಭಿವೃದ್ದಿ ಬಗ್ಗೆ ಕಾಳಜಿ ಹೊಂದಿರುವ ಇವರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆ ಶರ ವೇಗದಲ್ಲಿ ಅಭಿವೃದ್ದಿ ಕಾಣುವುದರಲ್ಲಿ ಸಂದೇಹವಿಲ್ಲ ಎಂದು ಉಪ ಮುಖ್ಯಮಂತ್ರಿಯವರಲ್ಲಿ ಕೋರಿದರು.
ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಅವಿನಾಶ್, ಪಾಂಡು ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now