Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ SIR ಲೋಪ : ಬಿಜೆಪಿ, ಜೆಡಿಎಸ್‌ ನಾಯಕರಿಂದ ಚುನಾವಣಾಧಿಕಾರಿಗೆ ದೂರು

---Advertisement---

ಬೆಂಗಳೂರುಜುಲೈ.06: ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪದೋಷಗಳು ನಡೆದಿವೆ ಎಂದು ಆರೋಪಿಸಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಪ್ರಮುಖ ನಾಯಕರು ಜಂಟಿಯಾಗಿ ಮುಖ್ಯ ಚುನಾವಣಾಧಿಕಾರಿಗೆ ಅಧಿಕೃತ ದೂರು ಸಲ್ಲಿಸಿದ್ದಾರೆ.

ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ಶೋಭಾ ಕರಂದ್ಲಾಜೆ, ಹೆಚ್.ಡಿ. ಕುಮಾರಸ್ವಾಮಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಹಿರಿಯ ಮುಖಂಡರಾದ ಸಿ.ಟಿ. ರವಿ, ಡಾ. ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಸಂಸದ ಗೋವಿಂದ ಕಾರಜೋಳ ಅವರನ್ನೊಳಗೊಂಡ ಉನ್ನತ ಮಟ್ಟದ ನಿಯೋಗವು ಚುನಾವಣಾಧಿಕಾರಿಗಳನ್ನು ಖುದ್ದಾಗಿ ಭೇಟಿ ಮಾಡಿ ಮನವಿ ಪತ್ರ ಹಸ್ತಾಂತರಿಸಿತು.

ರಾಜ್ಯದಲ್ಲಿ ಸದ್ಯ ಜಾರಿಯಲ್ಲಿರುವ ಎಸ್‌ಐಆರ್ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆಯುತ್ತಿಲ್ಲ ಮತ್ತು ಇದರಲ್ಲಿ ಹಲವು ನಿಯಮಾವಳಿಗಳ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ಪ್ರಮುಖವಾಗಿ ಪ್ರಶ್ನಿಸಲಾಗಿದೆ. ಈ ಕೂಡಲೇ ಚುನಾವಣಾ ಆಯೋಗವು ಮಧ್ಯಪ್ರವೇಶಿಸಿ ಲೋಪಗಳನ್ನು ಸರಿಪಡಿಸಬೇಕು ಎಂದು ಮೈತ್ರಿ ನಾಯಕರು ಒತ್ತಾಯಿಸಿದ್ದಾರೆ.

 

Join WhatsApp

Join Now

Join Telegram

Join Now