Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುಮಾರಸ್ವಾಮಿ ಬೆಂಬಲಿಗರಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್; ತನಿಖೆಗೆ ತಡೆ

---Advertisement---

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಘೋಷಣೆ ಕೂಗಿ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ ಆರೋಪದಡಿ ದಾಖಲಾದ ಕ್ರಿಮಿನಲ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಅಭಿಮಾನಿಗಳು ಎಂದು ಹೇಳಲಾಗಿರುವ ನಾಲ್ವರ ವಿರುದ್ಧ ನಡೆಯುತ್ತಿದ್ದ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.ಪ್ರಕರಣ ರದ್ದುಪಡಿಸುವಂತೆ ಕೋರಿ ಚಿಕ್ಕಬಳ್ಳಾಪುರ ಜಿಲ್ಲೆಯ ಅಂದರಹಳ್ಳಿಯ ಮೋಹನ್ ರಾಜ್, ಜಡೇಮಾರನಹಳ್ಳಿಯ ಅಕ್ಕುಲ ರೆಡ್ಡಿ ಅಲಿಯಾಸ್ ಅಖಿಲ್ ರೆಡ್ಡಿ, ತಲಹಳ್ಳಿಯ ಟಿ.ಎಸ್. ಮಹೇಂದ್ರ ಹಾಗೂ ಅಡವಿಗೊಲ್ಲರಹಳ್ಳಿಯ ಪ್ರಕಾಶ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ನಡೆಸಿ, ಪ್ರಕರಣದ ಮುಂದಿನ ತನಿಖೆಗೆ ತಾತ್ಕಾಲಿಕ ತಡೆ ನೀಡಿದೆ. ಜೊತೆಗೆ ಪ್ರತಿವಾದಿಗಳಾದ ಚಿಕ್ಕಬಳ್ಳಾಪುರ ಟೌನ್ ಪೊಲೀಸ್ ಠಾಣಾಧಿಕಾರಿ ಹಾಗೂ ದೂರುದಾರ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಎಸ್.ಎಂ. ಅಮರ್ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದೆ.ಅರ್ಜಿದಾರರು, ತಮ್ಮ ವಿರುದ್ಧ ಚಿಕ್ಕಬಳ್ಳಾಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿರುವ ಎಫ್‌ಐಆರ್, ಅದರ ಆಧಾರದ ಮೇಲೆ ನಡೆಯುತ್ತಿರುವ ತನಿಖೆ ಹಾಗೂ ಚಿಕ್ಕಬಳ್ಳಾಪುರ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಸಿಜೆಎಂ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಕರಣದ ಹಿನ್ನೆಲೆ
ಜೂನ್ 27ರಂದು ಬೆಳಗ್ಗೆ ಸುಮಾರು 11.30ಕ್ಕೆ ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿತ್ತು ಎನ್ನಲಾಗಿದೆ. ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಘೋಷಣೆ ಕೂಗುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದು ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಚಿಕ್ಕಬಳ್ಳಾಪುರ ಟೌನ್ ಪೊಲೀಸರು ನಾಲ್ವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 189, 192(2), 132, 352 ಹಾಗೂ 351(3) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.ಇದೀಗ ಹೈಕೋರ್ಟ್ ತನಿಖೆಗೆ ಮಧ್ಯಂತರ ತಡೆ ನೀಡಿರುವ ಹಿನ್ನೆಲೆಯಲ್ಲಿ, ಪ್ರಕರಣದ ಮುಂದಿನ ಬೆಳವಣಿಗೆಗಳತ್ತ ರಾಜಕೀಯ ಹಾಗೂ ಕಾನೂನು ವಲಯದ ಗಮನ ನೆಟ್ಟಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now