Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಾಯದಲ್ಲಿ ಮದುವೆಗೆ ಅವಕಾಶ ನೀಡುವ ಶರಿಯತ್ ಕಾನೂನು ಪೋಕ್ಸೋ ಕಾಯ್ದೆಯನ್ನು ಉಲ್ಲಂಘಿಸುತ್ತದೆ : ಅಲಹಾಬಾದ್ ಹೈಕೋರ್ಟ್

---Advertisement---

ಅಲಹಾಬಾದ್.ಜುಲೈ.08: ಮುಸ್ಲಿಂ ವೈಯಕ್ತಿಕ ಕಾನೂನು (ಶರಿಯತ್) ಗಿಂತ ‘ಬಾಲ್ಯವಿವಾಹ ನಿಷೇಧ ಕಾಯ್ದೆ, 2006’ (PCMA) ಮೇಲುಗೈ ಸಾಧಿಸುತ್ತದೆ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಮುಸ್ಲಿಂ ಯುವತಿಯು ಕೇವಲ ಋತುಮತಿಯಾಗಿದ್ದಾಳೆ ಎಂಬ ಕಾರಣಕ್ಕೆ ಆಕೆಗೆ 18 ವರ್ಷ ತುಂಬುವ ಮುನ್ನ ಮದುವೆ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗಿಯರ ವಿವಾಹವು ಅನಿವಾರ್ಯವಾಗಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ – POCSO) ಕಾಯ್ದೆಯಡಿ ಅಪರಾಧಗಳಿಗೆ ಕಾರಣವಾಗುತ್ತದೆ ಎಂದು ನ್ಯಾಯಾಲಯದ ಪೀಠವು ಗಂಭೀರವಾಗಿ ಗಮನಿಸಿದೆ.

ನ್ಯಾಯಮೂರ್ತಿಗಳಾದ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ಅಚಲ್ ಸಚ್‌ದೇವ್ ಅವರಿದ್ದ ವಿಭಾಗೀಯ ಪೀಠವು ಈ ಆದೇಶ ನೀಡಿದೆ. ಉತ್ತರ ಪ್ರದೇಶದ ಬುಲಂದ್‌ ಶಹರ್ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯ ಬಾಲ್ಯವಿವಾಹವನ್ನು ತಡೆಯಲು ಬಂದ ಪೊಲೀಸ್ ಮತ್ತು ಚೈಲ್ಡ್ ಲೈನ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ 19 ಆರೋಪಿಗಳ ವಿರುದ್ಧ ದಾಖಲಾಗಿದ್ದ ಎಫ್‌ ಐಆರ್ ರದ್ದುಗೊಳಿಸಲು ನಿರಾಕರಿಸಿ ಕೋರ್ಟ್ ಈ ತೀರ್ಪು ನೀಡಿದೆ.

ನ್ಯಾಯಾಲಯದ ಪ್ರಕಾರ, ಧರ್ಮದ ಭೇದವಿಲ್ಲದೆ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಬಾಲ್ಯವಿವಾಹ ನಿಷೇಧ ಕಾಯ್ದೆ (PCMA) ಸಮಾನವಾಗಿ ಅನ್ವಯಿಸುತ್ತದೆ. ಶರಿಯತ್ ಕಾನೂನಿನ ಪ್ರಕಾರ ಸಾಮಾನ್ಯವಾಗಿ 15 ವರ್ಷಕ್ಕೆ ಋತುಮತಿಯಾದಾಗ ವಿವಾಹವಾಗಬಹುದು ಎಂಬ ನಿಯಮವಿದ್ದರೂ, ಅದು PCMA ಮತ್ತು ಪೋಕ್ಸೊ ಕಾಯ್ದೆಗಳ ಆಶಯಕ್ಕೆ ಸಂಪೂರ್ಣ ವಿರುದ್ಧವಾಗಿದೆ ಎಂದು ಕೋರ್ಟ್ ಹೇಳಿದೆ.

ಪೋಕ್ಸೊ ಕಾಯ್ದೆಯಡಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಮಕ್ಕಳಾಗಿರುವುದರಿಂದ, ಅಂತಹ ಬಾಲಕಿಯರ ಮದುವೆಯ ನಂತರ ದೈಹಿಕ ಸಂಬಂಧ ಏರ್ಪಟ್ಟರೆ ಅದು ಕಾನೂನುಬಾಹಿರ ಲೈಂಗಿಕ ಅಪರಾಧದ ವ್ಯಾಪ್ತಿಗೆ ಬರುತ್ತದೆ. ಬಾಲ್ಯವಿವಾಹ ನಿಷೇಧ ಮತ್ತು ಪೋಕ್ಸೊ ಕಾಯ್ದೆಗಳು ಸಾರ್ವಜನಿಕ ಆರೋಗ್ಯ ಮತ್ತು ರಾಷ್ಟ್ರೀಯ ನೀತಿಯನ್ನು ಆಧರಿಸಿ ರಚಿತವಾಗಿರುವುದರಿಂದ, ಇದರಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪೀಠವು ಸ್ಪಷ್ಟಪಡಿಸಿದೆ.

ಫೆಬ್ರವರಿ 15, 2026 ರಂದು ಬುಲಂದ್‌ ಶಹರ್‌ ನ ಸುನ್‌ ಪೇಡಾ ಬಕ್ಸುವಾ ಗ್ರಾಮದಲ್ಲಿ 16 ವರ್ಷದ ಬಾಲಕಿಯ ವಿವಾಹ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಚೈಲ್ಡ್ ಲೈನ್ ತಂಡ ಸ್ಥಳಕ್ಕೆ ಧಾವಿಸಿತ್ತು. ಅಧಿಕಾರಿಗಳು ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲು ಮುಂದಾದಾಗ, ಆರೋಪಿಗಳು ಮತ್ತು ಅವರ ಬೆಂಬಲಿಗರು ಅಧಿಕಾರಿಗಳನ್ನು ನಿಂದಿಸಿ, ಬೆದರಿಕೆ ಹಾಕಿ, ಚೈಲ್ಡ್ ಲೈನ್ ಸಿಬ್ಬಂದಿ ವಶದಲ್ಲಿದ್ದ ಬಾಲಕಿಯನ್ನು ಬಲವಂತವಾಗಿ ಅಪಹರಿಸಿದ್ದರು. ಈ ಹಿನ್ನೆಲೆಯಲ್ಲಿ 19 ಜನರ ವಿರುದ್ಧ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಎಫ್‌ ಐಆರ್ ದಾಖಲಿಸಲಾಗಿತ್ತು.

ಅರ್ಜಿದಾರರು ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ 15 ವರ್ಷ ತುಂಬಿದ ಋತುಮತಿ ಹುಡುಗಿ ಮದುವೆಗೆ ಅರ್ಹಳು ಎಂದು ವಾದಿಸಿ ಎಫ್‌ ಐಆರ್ ರದ್ದುಗೊಳಿಸುವಂತೆ ಕೋರಿದ್ದರು. ಆದರೆ, ಕೇರಳ ಹೈಕೋರ್ಟ್‌ನ ‘ಮೊಯ್ದುಟ್ಟಿ ಮುಸ್ಲಿಯಾರ್’ ಪ್ರಕರಣದ ತೀರ್ಪನ್ನು ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್, ಯಾವುದೇ ವೈಯಕ್ತಿಕ ಕಾನೂನುಗಳು ಶಾಸನಬದ್ಧ ಬಾಲ್ಯವಿವಾಹ ನಿಷೇಧ ಕಾಯ್ದೆಯನ್ನು ಮೀರಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತು. ಬಾಲ್ಯವಿವಾಹ ತಡೆದ ಅಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿದ ನ್ಯಾಯಾಲಯವು, ಆರೋಪಿಗಳ ವಿರುದ್ಧ ತನಿಖೆ ಮುಂದುವರಿಸುವಂತೆ ಪೊಲೀಸರಿಗೆ ಆದೇಶಿಸಿದೆ.

Join WhatsApp

Join Now

Join Telegram

Join Now