Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ಯಲ್ಲಾಪುರದಲ್ಲಿ ಭೀಕರ ರಸ್ತೆ ಅಪಘಾತ: ಲಾರಿ-ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿ 6 ಜನ ಸಾವು!

---Advertisement---

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ರಸ್ತೆಯ ಬಳಗಾರ್ ಸಮೀಪ ಸಂಭವಿಸಿದ ಅಪಘಾತದಲ್ಲಿ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಪ್ರವಾಸಕ್ಕೆಂದು ಹೊರಟಿದ್ದ ಕ್ರೂಸರ್ ವಾಹನ ಹಾಗೂ ಲಾರಿಯ ನಡುವೆ ಉಂಟಾದ ಡಿಕ್ಕಿಯೇ ಈ ದುರಂತಕ್ಕೆ ಕಾರಣವಾಗಿದೆ. ಮೃತಪಟ್ಟ ದುರ್ದೈವಿಗಳೆಲ್ಲರೂ ಧಾರವಾಡ ಮೂಲದವರೆಂದು ಗುರುತಿಸಲಾಗಿದೆ. ಕ್ರೂಸರ್ ಚಾಲಕ ಸಂಜೀವ್ (33), ಬಸವರಾಜ್ (48), ಅಭಿಷೇಕ್ ಈಶ್ವರ್ (28), ಅಕ್ಷಯ್ (26), ಅಭಿಷೇಕ್ (26) ಹಾಗೂ ಮಂಜುನಾಥ್ ಅಶೋಕ್ ಚುಲಕಿ (32) ಅಪಘಾತದಲ್ಲಿ ಜೀವ ಕಳೆದುಕೊಂಡ ದುರ್ದೈವಿಗಳಾಗಿದ್ದಾರೆ.

ಘಟನೆಯಲ್ಲಿ ಕ್ರೂಸರ್ ನಲ್ಲಿದ್ದ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಶಿವರಾಜ ದುರ್ಗಪ್ಪ ಮಡಿವಾಳ (22), ಚೆನ್ನಬಸಯ್ಯ ಬಸಲಿಂಗಯ್ಯ ಸಂಪಗಾವ (28) ಮತ್ತು ಸಚಿನ್ ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join WhatsApp

Join Now

Join Telegram

Join Now