Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಬರಪೀಡಿತ ಪ್ರದೇಶ ಘೋಷಣೆಗೆ ಮಹತ್ವದ ಕ್ರಮ; ಪ್ರಸ್ತಾವನೆ ಸಲ್ಲಿಕೆಗೆ ಸಿಎಸ್ ಸೂಚನೆ!

---Advertisement---

ಬೆಂಗಳೂರು.ಜುಲೈ.10: ರಾಜ್ಯದ ಹಲವೆಡೆ ತೀವ್ರ ಮಳೆ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ, ಅರ್ಹ ಪ್ರದೇಶಗಳನ್ನು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ಗಳೆಂದು ಘೋಷಿಸಲು ಸರ್ಕಾರ ಬಿರುಸಿನ ಕ್ರಮಗಳನ್ನು ಕೈಗೊಂಡಿದೆ. ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ವಿಭಾಗಕ್ಕೆ ಮಹತ್ವದ ಅಧಿಕೃತ ಟಿಪ್ಪಣಿಯೊಂದನ್ನು ಹೊರಡಿಸುವ ಮೂಲಕ ತುರ್ತು ಸೂಚನೆ ನೀಡಿದ್ದಾರೆ.

ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಾನ್ಯ ಉಪಮುಖ್ಯಮಂತ್ರಿಗಳ ನೇರ ನಿರ್ದೇಶನದ ಮೇರೆಗೆ ಈ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ. ರಾಜ್ಯದಲ್ಲಿ ಸತತ ಮೂರು ವಾರಗಳ ಕಾಲ ಮಳೆಯಾಗದೇ ಇರುವ ಮತ್ತು ಶೇಕಡಾ 60 ಕ್ಕಿಂತ ಕಡಿಮೆ ಮಳೆಯಾಗಿರುವ ಪ್ರದೇಶಗಳನ್ನು ಬರಪೀಡಿತ ಎಂದು ಘೋಷಿಸಲು ಪ್ರಾಥಮಿಕವಾಗಿ ಗುರುತಿಸಲಾಗುತ್ತಿದೆ. ಇದರೊಂದಿಗೆ ಸರ್ಕಾರ ನಿಗದಿಪಡಿಸಿರುವ ಇತರ ಕಠಿಣ ಮಾನದಂಡಗಳನ್ನು ಪೂರೈಸುವ ಪ್ರದೇಶಗಳಲ್ಲಿ ಕೇವಲ ಒಂದು ವಾರದೊಳಗೆ ಕಡ್ಡಾಯವಾಗಿ ಸ್ಥಳ ಪರಿಶೀಲನೆ ಅಂದರೆ ‘ಗ್ರೌಂಡ್ ಟ್ರುತಿಂಗ್’ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿದೆ.

ಸ್ಥಳ ಪರಿಶೀಲನೆ ಮುಗಿದ ತಕ್ಷಣವೇ ಜಿಲ್ಲಾಧಿಕಾರಿಗಳು ಅಗತ್ಯ ಪ್ರಸ್ತಾವನೆಗಳನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕೆಂದು ಕಡಾಖಂಡಿತವಾಗಿ ಆದೇಶಿಸಲಾಗಿದೆ. ಕಂದಾಯ ಇಲಾಖೆಯ (ವಿಪತ್ತು ನಿರ್ವಹಣೆ) ಕಾರ್ಯದರ್ಶಿಯವರಾದ ಶ್ರೀ ಮನೋಜ್ ಕುಮಾರ್ ಮೀನಾ ಅವರಿಗೆ ಈ ಇಡೀ ಪ್ರಕ್ರಿಯೆಯ ಉಸ್ತುವಾರಿ ವಹಿಸಿ ಅಗತ್ಯ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಗಳು ಸೂಚಿಸಿದ್ದಾರೆ. ಈ ಎಲ್ಲಾ ವರದಿಗಳು ಕೈ ಸೇರಿದ ತಕ್ಷಣವೇ ರಾಜ್ಯ ಸರ್ಕಾರವು ಅಧಿಕೃತವಾಗಿ ಬರಪೀಡಿತ ತಾಲೂಕು ಅಥವಾ ಪ್ರದೇಶಗಳ ಪ್ರಕಟಣೆಯನ್ನು ಹೊರಡಿಸಲಿದೆ.

Join WhatsApp

Join Now

Join Telegram

Join Now