Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮಳೆರಾಯನ ಅನುಗ್ರಹಕ್ಕಾಗಿ ಹುಲ್ಲೂರಿನಲ್ಲಿ ವಿಶೇಷ ಯಾಗ

---Advertisement---

ವರದಿ ಮತ್ತು ಫೋಟೋ ಕೃಪೆ
ವೇದಮೂರ್ತಿ. ಎಂ.
ಭೀಮಸಮುದ್ರ, ಚಿತ್ರದುರ್ಗ (ತಾ)
ಮೊ : 8088076203

ಸುದ್ದಿಒನ್, ಚಿತ್ರದುರ್ಗ, ಜುಲೈ. 11 :  ತಾಲೂಕಿನ ಹುಲ್ಲೂರು ಗ್ರಾಮದ ಶ್ರೀ ಕಾಳಿಕಾಂಬ ದೇವಿಯ ದೇವಸ್ಥಾನದ ಆವರಣದಲ್ಲಿ ಲೋಕಕಲ್ಯಾಣ ಹಾಗೂ ಮಳೆರಾಯನ ಅನುಗ್ರಹಕ್ಕಾಗಿ ಜುಲೈ 13ರ ಸೋಮವಾರದಂದು ವಿಶೇಷ ಯಾಗವನ್ನು ಹಮ್ಮಿಕೊಳ್ಳಲಾಗಿದೆ.

​ಈ ಧಾರ್ಮಿಕ ಕಾರ್ಯಕ್ರಮವು ಅಂದು ಬೆಳಿಗ್ಗೆ 7:20 ರಿಂದಲೇ ವಿಧ್ಯುಕ್ತವಾಗಿ ಚಾಲನೆ ಪಡೆಯಲಿದೆ. ಬೆಳಿಗ್ಗೆ 11:00 ಗಂಟೆಗೆ ಅಂಕಲೇರಿ ಬೆಟ್ಟದ ಮೇಲೆ ಪವಿತ್ರ ಗಂಗೆ ಪೂಜೆಯನ್ನು ನೆರವೇರಿಸಲಾಗುತ್ತದೆ. ತದನಂತರ ಬೆಳಿಗ್ಗೆ 11:30 ಕ್ಕೆ ಹುಲ್ಲೂರು ಕೆರೆಯಲ್ಲಿರುವ ನಾಗರಕಟ್ಟೆಗೆ ವಿಶೇಷ ಪೂಜೆ ಸಲ್ಲಿಸಿ, ಅಲ್ಲಿಂದ ಭವ್ಯ ಶೋಭಾಯಾತ್ರೆ ಹಾಗೂ ಯಾಗದ ಮುಖ್ಯ ವಿಧಿವಿಧಾನಗಳು ಪ್ರಾರಂಭವಾಗಲಿವೆ. ಮಧ್ಯಾಹ್ನ 1:00 ಗಂಟೆಯಿಂದ ಆಗಮಿಸುವ ಭಕ್ತಾದಿಗಳಿಗೆ ಮಹಾಪ್ರಸಾದದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ದೇವಸ್ಥಾನದ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

​ಬೆಂಗಳೂರಿನ ಅಂದ್ರಳ್ಳಿಯ ಜೋಡಿ ಮುನೇಶ್ವರ ಸ್ವಾಮಿ ಕ್ಷೇತ್ರದ ಶ್ರೀ ಶ್ರೀ ಶಿವಶಂಕರ ಗುರೂಜಿ ಅವರ ದಿವ್ಯ ನೇತೃತ್ವದಲ್ಲಿ ಈ ಸಮಸ್ತ ಧಾರ್ಮಿಕ ವಿಧಿವಿಧಾನಗಳು ಜರುಗಲಿವೆ. ಈ ಪುಣ್ಯ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಸ್ಥಾನದ ಕಮಿಟಿ ಕೋರಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now