Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಖ್ಯಾತ ಗಾಯಕಿ ಎಸ್. ಜಾನಕಿ ನಿಧನ: ಇಂದು ಸಂಜೆ ಮೈಸೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ

---Advertisement---

ಮೈಸೂರು: ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹೆಮ್ಮೆಯ ಕೋಗಿಲೆ, ಹಿರಿಯ ಗಾಯಕಿ ಎಸ್. ಜಾನಕಿ (88) ಅವರು ಶನಿವಾರ ಸಂಜೆ ಮೈಸೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಭಾನುವಾರ ಸಂಜೆ ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಕಣಿಯನಹುಂಡಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹಾಗೂ ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅವರ ಅಂತಿಮ ವಿಧಿವಿಧಾನಗಳು ನೆರವೇರಲಿವೆ.

ಸಾರ್ವಜನಿಕರು ಹಾಗೂ ಅಭಿಮಾನಿಗಳಿಗೆ ಅಂತಿಮ ದರ್ಶನ ಪಡೆಯಲು ಭಾನುವಾರ ಬೆಳಿಗ್ಗೆ 8 ಗಂಟೆಯಿಂದಲೇ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಎಸ್. ಜಾನಕಿ ಅವರ ಕೊನೆಯ ಇಚ್ಛೆಯಂತೆಯೇ ಈ ಎಲ್ಲ ಕಾರ್ಯಗಳು ಜರುಗುತ್ತಿರುವುದು ವಿಶೇಷ. ಮೊದಲು ನವೀನ್ ಫಾರಂ ಹೌಸ್‌ನಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸಿ, ಆನಂತರ ಕಣಿಯನಹುಂಡಿಯಲ್ಲಿ ಸಾರ್ವಜನಿಕ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ.

ಕೆಲವು ವರ್ಷಗಳ ಹಿಂದೆಯೇ ಜಾನಕಿ ಅವರ ಪುತ್ರ ಮುರಳಿಕೃಷ್ಣ ಅವರು ನಿಧನರಾಗಿದ್ದ ಹಿನ್ನೆಲೆಯಲ್ಲಿ, ಅವರ ಮೊಮ್ಮಗಳು ಅಪ್ಸರಾ ಅವರು ಅಂತಿಮ ಸಂಸ್ಕಾರದ ಧಾರ್ಮಿಕ ವಿಧಿಗಳನ್ನು ನೆರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಗೆ ಭೇಟಿ ನೀಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಸ್ವತಃ ದೂರವಾಣಿ ಕರೆ ಮಾಡಿ, ಗಾಯಕಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ವಿದಾಯ ಹೇಳಲು ಸೂಚಿಸಿದ್ದು, ಕುಟುಂಬದ ಸದಸ್ಯರ ಒಪ್ಪಿಗೆಯ ಮೇರೆಗೆ ಮೈಸೂರಿನಲ್ಲೇ ಅಂತ್ಯಸಂಸ್ಕಾರ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now