ಬೆಂಗಳೂರು.ಜುಲೈ.12: ರಾಜ್ಯದ ಸರ್ಕಾರಿ ನೌಕರರ ದೀರ್ಘಕಾಲದ ಬೇಡಿಕೆಯಾದ ಹಳೇ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗೊಳಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ‘ನಮ್ಮಭಿಮಾನದ ಅಭಿನಂದನೆ’ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಹೊಸ ಪಿಂಚಣಿ ಯೋಜನೆ (ಎನ್ಪಿಎಸ್) ಬದಲಿಗೆ ಒಪಿಎಸ್ ಜಾರಿಗೆ ತರುವ ಕುರಿತು ನೌಕರರ ಸಂಘಟನೆಗಳು ಸಲ್ಲಿಸಿರುವ ಮನವಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಅರಮನೆ ಮೈದಾನದಲ್ಲಿ ಇಂದು ನಡೆದ 'ನಮ್ಮಭಿಮಾನದ ಅಭಿನಂದನಾ ಸಮಾರಂಭ'ದಲ್ಲಿ ಭಾಗವಹಿಸಿದೆ.
ಇದನ್ನು ಓದಿಉದ್ಯೋಗಿಗಳೇ ಗಮನಿಸಿ: ಪಿಎಫ್ ಬಡ್ಡಿದರ, ಹಿಂಪಡೆಯುವಿಕೆ ಮತ್ತು ಪೆನ್ಷನ್ ಗೆ ಸಂಬಂಧಿಸಿದ 12 ಪ್ರಮುಖ ನಿಯಮಗಳು ಇಲ್ಲಿವೆ!ರಾಜ್ಯದ ಅಭಿವೃದ್ಧಿ ಮತ್ತು ಜನಸೇವೆಯಲ್ಲಿ ಸರ್ಕಾರಿ ನೌಕರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಅವರ ನಿಷ್ಠೆ, ಪ್ರಾಮಾಣಿಕತೆ ಮತ್ತು ಸೇವಾ ಮನೋಭಾವ ಶ್ಲಾಘನೀಯ. ಉತ್ತಮ ಆಡಳಿತಕ್ಕಾಗಿ ಸರ್ಕಾರ ಸದಾ… pic.twitter.com/l2sh1jr2GH
— DK Shivakumar (@DKShivakumar) July 11, 2026
ಈ ಕುರಿತು ಈಗಾಗಲೇ ಸರ್ಕಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದು, ಅಧ್ಯಯನ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಸಮಿತಿಯ ವರದಿ ಕೈ ಸೇರಿದ ತಕ್ಷಣವೇ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಗುವುದು. ಅಲ್ಲದೆ, ನೌಕರರ ಸಂಘದ ಪದಾಧಿಕಾರಿಗಳ ಜೊತೆಯೂ ಮಾತುಕತೆ ನಡೆಸಿ, ಸರ್ಕಾರದ ಮಿತಿಯಲ್ಲಿ ಸಾಧ್ಯವಿರುವ ಎಲ್ಲಾ ನೆರವು ಹಾಗೂ ಸಹಕಾರವನ್ನು ನೀಡುವುದಾಗಿ ಸಿಎಂ ಭರವಸೆ ನೀಡಿದರು.
ಆಡಳಿತ ಯಂತ್ರ ಸುಗಮವಾಗಿ ಸಾಗಲು ಸರ್ಕಾರಿ ನೌಕರರೇ ಆಧಾರ ಸ್ತಂಭ ಎಂದು ಬಣ್ಣಿಸಿದ ಮುಖ್ಯಮಂತ್ರಿಗಳು, ನೌಕರರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದರು. ಸರ್ಕಾರ ಮತ್ತು ನೌಕರರು ಒಂದು ಕುಟುಂಬದಂತೆ ಕೆಲಸ ಮಾಡಬೇಕಾಗಿದ್ದು, ಮುಂದಿನ ದಿನಗಳಲ್ಲೂ ಪರಸ್ಪರ ವಿಶ್ವಾಸದೊಂದಿಗೆ ಒಟ್ಟಾಗಿ ಸಾಗೋಣ ಎಂಬ ಆಶಯವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.








