ಬೆಂಗಳೂರು.ಜುಲೈ.13: ದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿಯಲ್ಲಿ ನೆರವೇರುವ ದಿನದ ಮೊದಲ ಆರತಿ ಸೇವೆಯಲ್ಲಿ ಇನ್ಮುಂದೆ ಕರ್ನಾಟಕದ ಗಣ್ಯರಿಗೂ ಆದ್ಯತೆ ಸಿಗಲಿದೆ.
ರಾಜ್ಯದ ಜನಪ್ರತಿನಿಧಿಗಳು ಹಾಗೂ ವಿವಿಐಪಿಗಳಿಗೆ ಶಿಷ್ಟಾಚಾರದ ಪ್ರಕಾರ ಮೊದಲ ಆರತಿ ಗೌರವ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ.
ಷಡಾನನಂ ಕುಂಕುಮ ರಕ್ತವರ್ಣಂ
ಮಹಾಮತಿಂ ದಿವ್ಯಮಯೂರ ವಾಹನಮ್
ರುದ್ರಸ್ಯ ಸೂನುಂ ಸುರಸೈನ್ಯನಾಥಂ
ಗುಹಂ ಸದಾ ಶರಣಮಹಂ ಪ್ರಪದ್ಯೇ ||ಇದನ್ನು ಓದಿಚಳ್ಳಕೆರೆ | ಅಂಬುಜಾಕ್ಷಿ ನಿಧನಬೆಂಗಳೂರಿನ ಬನಶಂಕರಿ 6ನೇ ಹಂತದಲ್ಲಿಂದು ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಭೂಮಿಪೂಜೆಯಲ್ಲಿ ಭಾಗವಹಿಸಿ, ಶುಭಕಾರ್ಯವನ್ನು ಆರಂಭಿಸಲಾಯಿತು.
ಈ ಪವಿತ್ರ ದೇವಸ್ಥಾನ ನಿರ್ಮಾಣವು ಭಕ್ತಿ, ಸಂಸ್ಕೃತಿ ಮತ್ತು… pic.twitter.com/JTLPPS3Z54
— DK Shivakumar (@DKShivakumar) July 12, 2026
ನಗರದ ಬನಶಂಕರಿ 6ನೇ ಹಂತದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಶ್ರೀ ಷಣ್ಮುಖ ಸುಬ್ರಮಣ್ಯ ಸ್ವಾಮಿ ದೇವಾಲಯದ ಭವ್ಯ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ತಿರುಪತಿ ತಿರುಮಲ ದೇವಸ್ಥಾನದಲ್ಲಿ ಕರ್ನಾಟಕದ ಪ್ರಮುಖರಿಗೆ ಈ ವಿಶೇಷ ಸೌಲಭ್ಯ ಕಲ್ಪಿಸುವ ಕುರಿತು ಆಂಧ್ರಪ್ರದೇಶ ಸರ್ಕಾರದೊಂದಿಗೆ ಸಮನ್ವಯ ಸಾಧಿಸಿ, ಶೀಘ್ರದಲ್ಲೇ ರಾಜ್ಯ ಸರ್ಕಾರದಿಂದ ಅಧಿಕೃತ ನಿಯಮಾವಳಿಗಳನ್ನು ಪ್ರಕಟಿಸಲಾಗುವುದು ಎಂದು ಸಿಎಂ ಈ ಸಂದರ್ಭದಲ್ಲಿ ಭರವಸೆ ನೀಡಿದರು.
ತಿರುಮಲ ವೆಂಕಟೇಶ್ವರ ದೇವಾಲಯದ ಒಳ ಮುಖ್ಯ ದ್ವಾರದ ಬಳಿ ತೆರಳಿ ಪೂಜೆ ಮಾಡಲು ಕರ್ನಾಟಕದ ಮುಖ್ಯಮಂತ್ರಿ ಅವರಿಗೆ ಮಾತ್ರ ಅವಕಾಶವಿದೆ. ಈ ಆರತಿಯನ್ನು ಪ್ರತಿದಿನ ನಮ್ಮ ರಾಜ್ಯ ಸರ್ಕಾರದ ವಿಶೇಷ ಅಧಿಕಾರಿ ಪಡೆಯುತ್ತಾರೆ. ಇನ್ನು ಮುಂದಿನ ದಿನಗಳಲ್ಲಿ ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು, ನ್ಯಾಯಾಧೀಶರು ಸೇರಿ ಯಾರಾದರೂ ಭೇಟಿ ನೀಡಿದ್ದರೆ ಅಥವಾ ಸರ್ಕಾರದ ಪರ ಯಾರೇ ತಿರುಪತಿಗೆ ಹೋಗಿದ್ದರೂ ಅವರಿಗೆ ಈ ಆರತಿ ನೀಡಬೇಕು ಎನ್ನುವ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









