Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಕೋನಾಪುರ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್; ಚಾಲಕ ಸೇರಿ ಇಬ್ಬರ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

---Advertisement---

ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೋನಾಪುರ ಗ್ರಾಮದ ಬಳಿ ಖಾಸಗಿ ಬಸ್ಸೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ ಇಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿದ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್ ಚಾಲಕ ಮೊಹಮ್ಮದ್ ಮತ್ತು ಬಸ್ ನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಈ ಅಪಘಾತದಲ್ಲಿ ಬಸ್ ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮತ್ತು ಸ್ಥಳೀಯರು, ಗಾಯಾಳುಗಳನ್ನು ತಕ್ಷಣವೇ ರಾಂಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join WhatsApp

Join Now

Join Telegram

Join Now