Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ಮಾಜಿ ರಾಜ್ಯಸಭಾ ಸದಸ್ಯ ಹೆಚ್.ಹನುಮಂತಪ್ಪ ನಿಧನ; ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶ

---Advertisement---

ಚಿತ್ರದುರ್ಗ.ಜುಲೈ.13: ದೇಶ ಮತ್ತು ರಾಜ್ಯ ರಾಜಕಾರಣದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದ ಕಾಂಗ್ರೆಸ್ ನ ಹಿರಿಯ ರಾಷ್ಟ್ರೀಯ ನಾಯಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ (95) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಅವರ ನಿಧನಕ್ಕೆ ರಾಜ್ಯ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದೆ. ಮೃತರ ಸಮಾಜಸೇವೆ ಹಾಗೂ ದೇಶಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿರುವ ಸರ್ಕಾರ, ಮೃತರ ಗೌರವಾರ್ಥವಾಗಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಹಾಗೂ ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ಅಧಿಕೃತವಾಗಿ ಆದೇಶಿಸಿದೆ. ಹಿರಿಯ ನಾಯಕರ ಅಗಲಿಕೆಗೆ ನಾಡಿನ ಗಣ್ಯರು ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಸಿಎಂ, ಡಿಸಿಎಂ ಭೇಟಿ: ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಹನುಮಂತಪ್ಪ ಅವರಿಗೆ ಅಂತಿಮ ಗೌರವ ಸಲ್ಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆ. ಸಿಎಂ ಮತ್ತು ಡಿಸಿಎಂ ಭೇಟಿಯ ಹಿನ್ನೆಲೆಯಲ್ಲಿ ಜಯದೇವ ಕ್ರೀಡಾಂಗಣ ಹಾಗೂ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now