ಸುದ್ದಿಒನ್, ಚಿತ್ರದುರ್ಗ, ಜುಲೈ 13: ಚಿತ್ರದುರ್ಗ ತಾಲ್ಲೂಕಿನ ಬೆಳಗಟ್ಟ ಗ್ರಾಮದ ಪ್ರಮುಖರಾದ ಭವನಂ ರಂಗಾರೆಡ್ಡಿ (75 ವರ್ಷ) ಅವರು ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗ ಹಾಗೂ ಸ್ನೇಹಿತರನ್ನು ಅಗಲಿದ್ದಾರೆ.
ಮೃತರ ಪಾರ್ಥಿವ ಶರೀರವನ್ನು ಚಿತ್ರದುರ್ಗಕ್ಕೆ ತರಲಾಗುತ್ತಿದ್ದು, ಅಂತ್ಯಕ್ರಿಯೆಯನ್ನು ಇಂದು ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯಲ್ಲಿರುವ ಮುಕ್ತಿಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಭವನಂ ರಂಗಾರೆಡ್ಡಿ ಅವರ ನಿಧನಕ್ಕೆ ಬೆಳಗಟ್ಟ ಗ್ರಾಮಸ್ಥರು ಹಾಗೂ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.







