ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 13 : ಆಧುನಿಕ ಜೀವನ ಶೈಲಿ ಹಾಗೂ ಒತ್ತಡದ ನಡುವೆ ಪ್ರತಿಯೊಬ್ಬರು ಆಗಿಂದಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿರಬೇಕೆಂದು ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಸದಸ್ಯ ಹೆಚ್.ಅಂಜಿನಪ್ಪ ತಿಳಿಸಿದರು.
ಮುನ್ಸಿಪಲ್ ಕಾಂಪ್ಲೆಕ್ಸ್‍ನಲ್ಲಿರುವ ನಗರ ವಸತಿ ರಹಿತರ ಕೇಂದ್ರದಲ್ಲಿ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆಯಲ್ಲಿ ಭಾಗವಹಿಸಿ ಮಾತನಾಡಿದರು.
ರಾತ್ರಿ ತಂಗುದಾಣದಲ್ಲಿ ಮಹಿಳೆಯರು ಸುರಕ್ಷಿತವಾಗಿರಲು ನಗರ ವಸತಿ ರಹಿತರ ಕೇಂದ್ರ ತೆರೆಯಲಾಗಿದ್ದು, ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಿ. ಸರ್ಕಾರದಿಂದ ಇನ್ನು ಹೆಚ್ಚಿನ ಸೌವಲತ್ತುಗಳೇನಾದರೂ ಇದ್ದರೆ ಶಾಸಕರುಗಳ ಜೊತೆ ಮಾತನಾಡಿ ದೊರಕಿಸುವ ಪ್ರಯತ್ನ ಮಾಡುತ್ತೇನೆಂದು ಭರವಸೆ ನೀಡಿದರು.
ನಗರ ವಸತಿ ರಹಿತರ ಕೇಂದ್ರದ ಅಧ್ಯಕ್ಷೆ ಕವಿತಾ, ಕಾರ್ಯದರ್ಶಿ ಸೂರ್ಯನಾರಾಯಣ, ಕಾಂಗ್ರೆಸ್ ಮುಖಂಡ ಚಿದಾನಂದಮೂರ್ತಿ, ಕೇಂದ್ರದ ಕೋ-ಆರ್ಡಿನೇಟರ್ ದೇವರಾಜ್ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.







