ಬೆಂಗಳೂರು.ಜುಲೈ.14: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಕಾಲೇಜು ಶಿಕ್ಷಣ ಇಲಾಖೆಯು ಮಹತ್ವದ ಕ್ರಮ ಕೈಗೊಂಡಿದೆ. 2026-27ನೇ ಸಾಲಿನ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪರಿಷ್ಕೃತ ವೇಳಾಪಟ್ಟಿಯನ್ನು ಇಲಾಖೆ ಅಧಿಕೃತವಾಗಿ ಬಿಡುಗಡೆ ಮಾಡಿದೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಜುಲೈ 18 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಸಲ್ಲಿಸುವ ಅರ್ಜಿಯಲ್ಲಿನ ವಿದ್ಯಾರ್ಹತೆ ಮತ್ತು ಅರ್ಹತೆಯ ಆಧಾರದ ಮೇಲೆ ಜುಲೈ 19 ರಂದು ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಪ್ರಕಟಿಸಲು ಇಲಾಖೆ ತೀರ್ಮಾನಿಸಿದೆ.
ಒಂದೊಮ್ಮೆ ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಯಲ್ಲಿ ಯಾವುದೇ ತಪ್ಪುಗಳಿದ್ದಲ್ಲಿ ಅಥವಾ ಬದಲಾವಣೆಗಳನ್ನು ಮಾಡಬೇಕಾದಲ್ಲಿ, ಅವುಗಳನ್ನು ಸರಿಪಡಿಸಿಕೊಳ್ಳಲು ಜುಲೈ 19 ರಿಂದ 22 ರವರೆಗೆ ಎರಡು ದಿನಗಳ ಕಾಲ ವಿಶೇಷ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ.
ಇದಾದ ನಂತರ, ರಾಜ್ಯದ ವಿವಿಧ ಸರ್ಕಾರಿ ಕಾಲೇಜುಗಳಲ್ಲಿ ಲಭ್ಯವಿರುವ ಒಟ್ಟು ಬೋಧನಾ ಕಾರ್ಯಭಾರದ ಸಂಪೂರ್ಣ ವಿವರ ಹಾಗೂ ತಾತ್ಕಾಲಿಕ ಕಾರ್ಯಭಾರ ಪಟ್ಟಿಯನ್ನು ಜುಲೈ 25 ರಂದು ಪ್ರಕಟಿಸಲಾಗುತ್ತದೆ. ಮುಂದುವರಿದು, ಜುಲೈ 26 ರಂದು ಕೌನ್ಸೆಲಿಂಗ್ ಮೆರಿಟ್ ಪಟ್ಟಿ ಮತ್ತು ಕಾರ್ಯಭಾರದ ವಿವರಗಳನ್ನು ಬಿಡುಗಡೆ ಮಾಡಲಾಗುತ್ತದೆ. ಅಂತಿಮವಾಗಿ ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಅಧಿಕೃತ ಪಟ್ಟಿಯನ್ನು ಜುಲೈ 28 ರಂದು ಪ್ರಕಟಿಸಲಾಗುವುದು ಎಂದು ಕಾಲೇಜು ಶಿಕ್ಷಣ ಆಯುಕ್ತರು ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪಡೆಯಲು ಹಾಗೂ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ dce.karnataka.gov.in ಗೆ ಭೇಟಿ ನೀಡಬಹುದಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








