Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಂಸ ಪ್ರಿಯರಿಗೆ ಬೆಲೆ ಏರಿಕೆ ಶಾಕ್; ಚಿಕನ್, ಮೊಟ್ಟೆ ಬೆಲೆಯಲ್ಲಿ ಏರಿಕೆ!

---Advertisement---

ಬೆಂಗಳೂರು.ಜುಲೈ.14: ಭಾನುವಾರ ಬಂತು ಅಂದರೆ ಸಾಕು, ಕೈಯಲ್ಲೊಂದು ಬ್ಯಾಗ್ ಹಿಡಿದು ಚಿಕನ್ ಸ್ಟಾಲ್ ಗಳ ಮುಂದೆ ಕ್ಯೂ ನಿಲ್ಲುತ್ತಿದ್ದ ಬೆಂಗಳೂರಿಗರಿಗೆ ಈಗ ಬೆಲೆ ಏರಿಕೆಯ ಬಿಸಿ ಜೋರಾಗಿಯೇ ತಟ್ಟಿದೆ. ಕಳೆದ ಒಂದು ವಾರದಿಂದ ಸದ್ದಿಲ್ಲದೆ ಏರುತ್ತಿದ್ದ ಕೋಳಿ ಮಾಂಸ ಮತ್ತು ಮೊಟ್ಟೆಯ ದರ, ಇದೀಗ ಸಾರ್ವಕಾಲಿಕ ದಾಖಲೆಯ ಮಟ್ಟಕ್ಕೆ ತಲುಪುವ ಮೂಲಕ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದೆ.

ಕೆಲವೇ ದಿನಗಳ ಹಿಂದಷ್ಟೇ ಪ್ರತಿ ಕೆಜಿಗೆ 300 ರೂಪಾಯಿ ಆಸುಪಾಸಿನಲ್ಲಿದ್ದ ಚಿಕನ್ ದರ, ಈಗ ದಿಢೀರನೆ 350 ದಾಟಿ ಮುನ್ನುಗ್ಗುತ್ತಿದೆ. ಪ್ರಸ್ತುತ ಬೆಂಗಳೂರಿನ ಚಿಲ್ಲರೆ ಮಾರುಕಟ್ಟೆಯಲ್ಲಿ ವಿತೌಟ್ ಸ್ಕಿನ್ ಬಾಯ್ಲರ್ ಚಿಕನ್ ಬೆಲೆ ಭರ್ತಿ 360 ರೂಪಾಯಿಗೆ ತಲುಪಿದೆ. ಇನ್ನು ವಿತ್ ಸ್ಕಿನ್ ಚಿಕನ್ ಖರೀದಿಸಬೇಕಾದರೆ ಗ್ರಾಹಕರು ಪ್ರತಿ ಕೆಜಿಗೆ 340 ರೂಪಾಯಿ ನೀಡಬೇಕಾಗಿದೆ. ಈ ಹಠಾತ್ ದರ ಏರಿಕೆಯು ವಾರಾಂತ್ಯದ ಬಿರಿಯಾನಿ ಊಟದ ಬಜೆಟ್ ಅನ್ನು ಸಂಪೂರ್ಣವಾಗಿ ಏರುಪೇರು ಮಾಡಿದೆ.

ಮಾಂಸ ಮಾತ್ರವಲ್ಲದೆ, ಮೊಟ್ಟೆಯ ಬೆಲೆಯೂ ಗ್ರಾಹಕರಿಗೆ ಶಾಕ್ ನೀಡಿದೆ. ಕೇವಲ ಮೂರು ದಿನಗಳ ಹಿಂದಷ್ಟೇ 7 ರಿಂದ 7.50 ರೂಪಾಯಿಗೆ ಸಿಗುತ್ತಿದ್ದ ಒಂದು ಮೊಟ್ಟೆಯ ಬೆಲೆ ಈಗ ಚಿಲ್ಲರೆ ಅಂಗಡಿಗಳಲ್ಲಿ 8.30 ರಿಂದ 9 ರೂಪಾಯಿವರೆಗೆ ಮಾರಾಟವಾಗುತ್ತಿದೆ. ಸಗಟು ಮಾರುಕಟ್ಟೆಯಲ್ಲೇ ಒಂದು ಮೊಟ್ಟೆಯ ಬೆಲೆ 8 ರೂಪಾಯಿ ತಲುಪಿರುವುದರಿಂದ, ಚಿಲ್ಲರೆ ಮಾರುಕಟ್ಟೆಯಲ್ಲಿ ಗ್ರಾಹಕರು ಒಂಬತ್ತು ರೂಪಾಯಿ ಕೊಟ್ಟು ಖರೀದಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now