ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 14 : ಹೊಳಲ್ಕೆರೆ ರಸ್ತೆ, ಚೋಳಗುಡ್ಡದಲ್ಲಿರುವ ಟಿ.ಎಂ.ಕೆ.ಪೀರ್ಸಾಬ್ ಕಾಂಪೌಂಡ್ನಲ್ಲಿ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಮಂಗಳವಾರ ಸಿ.ಸಿ.ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಸಲ್ಲಿಸಿದರು.
ಸಿಎಂಐಡಿಪಿ. ಯೋಜನೆಯಡಿ ನಿರ್ಮಾಣಗೊಳ್ಳಲಿರುವ ರಸ್ತೆಗೆ ಭೂಮಿ ಸಲ್ಲಿಸಿದ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ನಿಗಧಿತ ಅವಧಿಯೊಳಗೆ ಗುಣಮಟ್ಟದ ರಸ್ತೆಯಾಗಬೇಕೆಂದು ಸಂಬಂಧಪಟ್ಟ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಗ್ಯಾರೆಂಟಿ ಯೋಜನೆ ಅನುಷ್ಟಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಲಕ್ಷ್ಮಿಕಾಂತ್, ಮರುಳಾರಾಧ್ಯ, ಪ್ರಕಾಶ್ರಾಮನಾಯ್ಕ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ಸೈಟ್ಬಾಬು, ನಗರಸಭೆ ಮಾಜಿ ನಾಮ ನಿರ್ದೇಶಕ ಸದಸ್ಯ ಹೆಚ್.ಶಬ್ಬೀರ್ಭಾಷ, ನಗರಸಭೆ ಪೌರಾಯುಕ್ತೆ ಲಕ್ಷ್ಮಿ, ಮಾಜಿ ಸದಸ್ಯರು ಹಾಗೂ ಚೋಳಗುಡ್ಡದ ಪ್ರಮುಖರು ಈ ಸಂದರ್ಭದಲ್ಲಿ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.







