ಸುದ್ದಿಒನ್, ಚಿತ್ರದುರ್ಗ, ಜುಲೈ. 14 : ರಂಗಸೌರಭ ಕಲಾ ಸಂಘ ಮತ್ತು ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಆಶ್ರಯದಲ್ಲಿ ನೀನಾಸಂ ಸಂಸ್ಥಾಪಕ ಸದಸ್ಯ, ರಂಗಕರ್ಮಿ ಕೆ.ವಿ ಸುಬ್ಬಣ್ಣ ಸ್ಮರಣೋತ್ಸವ ಅಂಗವಾಗಿ ಕನ್ನಡ ಗೀತಗಾಯನ ತರಬೇತಿ ಕಾರ್ಯಾಗಾರ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ಜುಲೈ 16 ರಂದು ಗುರುವಾರ ಬೆಳಿಗ್ಗೆ 10-30ಕ್ಕೆ ಶ್ರೀ ಸಿದ್ಧರಾಮೇಶ್ವರ ವಸತಿ ಪ್ರೌಢಶಾಲಾ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಏರ್ಪಡಿಸಲಾಗಿದೆ.
ಶಿಕ್ಷಣತಜ್ಞ ಮತ್ತು ನಾಟಕಕಾರ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯಶಿಕ್ಷಕ ಆನಂದ ತಳವಾರ ಅಧ್ಯಕ್ಷತೆ ವಹಿಸುವರು. ಹಿರಿಯ ಪತ್ರಕರ್ತ ಎಂ.ಎನ್.ಯೋಗೀಶ್ ಇವರು ರಂಗಕರ್ಮಿ ಕೆ.ವಿ.ಸುಬ್ಬಣ್ಣ ಬದುಕು ಬರಹ ಕುರಿತು ಉಪನ್ಯಾಸ ನೀಡಲಿದ್ದಾರೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಭೋವಿ ಗುರುಪೀಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೌನಹಳ್ಳಿ ಗೋವಿಂದಪ್ಪ, ವರದಿಗಾರ ಈ.ಮಹೇಶ್ಬಾಬು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.
ಇದೇ ಸಂದರ್ಭದಲ್ಲಿ ಡಿವಿಜಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕøತ ಹಿರಿಯ ಪತ್ರಕರ್ತ ಶ.ಮಂಜುನಾಥ ಹಾಗೂ ಕಥಾಸ್ಪರ್ಧೆ ರಾಜ್ಯ ಪ್ರಶಸ್ತಿ ವಿಜೇತ ಪತ್ರಕರ್ತ ಕೆ.ಪಿ.ಓಂಕಾರಮೂರ್ತಿ ಇವರನ್ನು ಸನ್ಮಾನಿಸಿ ಗೌರವಿಸಲಾಗುವುದು. ನೀನಾಸಂ ಪದವೀಧರ ಹಾಗೂ ರಂಗನಿರ್ದೇಶಕ ಕೆಪಿಎಂ. ಗಣೇಶಯ್ಯ ಕನ್ನಡ ಗೀತಗಾಯನ ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸರ್ಕಾರ ನಿಗಧಿಪಡಿಸಿದ ಸಂಗೀತ ಸಂಯೋಜನೆಯ ನಾಡಗೀತೆ, ರೈತಗೀತೆ, ರಾಷ್ಟ್ರಗೀತೆ, ವಂದೇಮಾತರಂ ಹಾಗೂ ಧ್ವಜಗೀತೆಗಳನ್ನು ಶ್ರೀ ಸಿದ್ಧರಾಮೇಶ್ವರ ವಸತಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿದ್ದಾರೆ ಎಂದು ರಂಗಸೌರಭ ಕಲಾ ಸಂಘದ ಅಧ್ಯಕ್ಷ ಡಾ.ಕೆ ಮೋಹನ್ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








