Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ವಿವಿ ಜಿ.ಆರ್.ಹಳ್ಳಿ ಸ್ನಾತಕೋತ್ತರ ಕೇಂದ್ರ: ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

---Advertisement---

ಸುದ್ದಿಒನ್, ಚಿತ್ರದುರ್ಗ. ಜುಲೈ16: ದಾವಣಗೆರೆ ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ ಚಿತ್ರದುರ್ಗದ ಜಿ.ಆರ್. ಹಳ್ಳಿಯಲ್ಲಿರುವ ಸ್ನಾತಕೋತ್ತರ ಕೇಂದ್ರದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕೋತ್ತರ ಪದವಿ ಕೋರ್ಸ್‍ಗಳ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 31 ಅರ್ಜಿ ಸಲ್ಲಿಸಲು ಕೊನೆಯ ದಿನ.

 

ಇಲ್ಲಿ ಎಂ.ಎ (ಕನ್ನಡ, ಇಂಗ್ಲಿಷ್, ಸಮಾಜಕಾರ್ಯ-ಎಂ.ಎಸ್.ಡಬ್ಲ್ಯೂ, ಅರ್ಥಶಾಸ್ತ್ರ), ಎಂ.ಎಸ್ಸಿ (ಸಸ್ಯಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಭೌತಶಾಸ್ತ್ರ ಪ್ರಾಣಿಶಾಸ್ತ್ರ) ಹಾಗೂ ಎಂ.ಕಾಂ ಕೋರ್ಸ್‍ಗಳು ಲಭ್ಯವಿವೆ. ಜಿ.ಆರ್. ಹಳ್ಳಿಯ ಸ್ನಾತಕೋತ್ತರ ಕೇಂದ್ರದ ಆವರಣವು ಒಟ್ಟು 81 ಎಕರೆ ವಿಸ್ತೀರ್ಣ ಹೊಂದಿದ್ದು, ಅತ್ಯುತ್ತಮ ಶೈಕ್ಷಣಿಕ ವಾತಾವರಣ ಹೊಂದಿದೆ.

 

ಅನುಭವಿ ಅಧ್ಯಾಪಕ ವೃಂದ, ಸುಸಜ್ಜಿತ ಆಡಳಿತ ಕಚೇರಿಗಳು, ತರಗತಿ ಕೊಠಡಿಗಳು, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಸತಿ ನಿಲಯಗಳು, ಆಟದ ಮೈದಾನ, ಎನ್.ಎಸ್.ಎಸ್. ಘಟಕ, ಕಂಪ್ಯೂಟರ್ ಪ್ರಯೋಗಾಲಯ, ಸುಸಜ್ಜಿತ ಗ್ರಂಥಾಲಯ ಹಾಗೂ ಸೆಮಿನಾರ್ ಹಾಲ್ ಸೌಲಭ್ಯಗಳಿವೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ನಿರಂತರ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ.

 

ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.davangereuniversity.ac.in  ಮೂಲಕ ಅರ್ಜಿ ನಮೂನೆಯನ್ನು ಡೌನ್‍ಲೋಡ್ ಮಾಡಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಪ್ರವೇಶಾತಿ ಶುಲ್ಕ ಪಾವತಿಸಿದ ರಶೀದಿಯ ಜೊತೆಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ, ಖುದ್ದಾಗಿ ಅಥವಾ ಅಂಚೆ ಮೂಲಕ ವಿಶೇಷ ಅಧಿಕಾರಿಗಳು, ಸ್ನಾತಕೋತ್ತರ ಕೇಂದ್ರ, ಜಿ.ಆರ್. ಹಳ್ಳಿ, ಚಿತ್ರದುರ್ಗ ಇವರ ಕಚೇರಿಗೆ ಸಲ್ಲಿಸಬೇಕಾಗಿರುತ್ತದೆ.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಜುಲೈ 31 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿ ಹಾಗೂ ಕೋರ್ಸ್‍ಗಳ ವಿವರಗಳಿಗಾಗಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್‍ನಲ್ಲಿ ಲಭ್ಯವಿರುವ ಪ್ರವೇಶಾತಿ ಪರಿಚಯ ಪುಸ್ತಕ ಗಮನಿಸಬಹುದಾಗಿದೆ ಎಂದು ದಾವಣಗೆರೆ ವಿಶ್ವವಿದ್ಯಾಲಯ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
===============

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now