Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೈತರಿಗೆ ಸಿಹಿಸುದ್ದಿ! 4 ಜಿಲ್ಲೆಗಳಲ್ಲಿ ಬೆಳೆ ವಿಮೆ ನೋಂದಣಿ ಅವಧಿ  ವಿಸ್ತರಣೆ

---Advertisement---

ಬೆಂಗಳೂರು: ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳ ರೈತರಿಗೆ ಕೇಂದ್ರ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದೆ. ತೀವ್ರ ಮಳೆ ಕೊರತೆ ಮತ್ತು ಬಿತ್ತನೆ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಧಾರವಾಡ, ಗದಗ, ಹಾವೇರಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಬೆಳೆ ವಿಮೆ ನೋಂದಣಿ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ.

ಈ ಮೊದಲು ಜುಲೈ 15 ಕೊನೆಯ ದಿನಾಂಕವಾಗಿತ್ತು. ಆದರೆ ಮಳೆ ಅಭಾವದಿಂದ ರೈತರು ವಿವಿಧ ರೀತಿಯ ಬೆಳೆಗಳನ್ನು ಬಿತ್ತನೆ ಮಾಡಿರುವ ಕಾರಣ, ಬೆಳೆ ವಿಮೆ ನೋಂದಣಿಯಲ್ಲಿ ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದವು. ಇದನ್ನು ಪರಿಗಣಿಸಿ ಕೇಂದ್ರ ಸರ್ಕಾರ ಅವಧಿ ವಿಸ್ತರಣೆ ಮಾಡಿದೆ.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚವ್ಹಾಣ್ ಅವರೊಂದಿಗೆ ಈ ಕುರಿತು ಚರ್ಚಿಸಿ ರೈತರ ಪರವಾಗಿ ಮನವಿ ಸಲ್ಲಿಸಿದ್ದರು. ಅಲ್ಲದೆ, ಶಾಸಕ ಸಿ.ಸಿ. ಪಾಟೀಲ್, ಎಂ.ಆರ್. ಪಾಟೀಲ್ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ರೈತರು ಸಹ ಈ ಸಮಸ್ಯೆಯನ್ನು ಸಚಿವರ ಗಮನಕ್ಕೆ ತಂದಿದ್ದರು.
ಇದರ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ಕೇಂದ್ರದ ಮಟ್ಟದಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಿತ್ತು. ರಾಜ್ಯ ಕೃಷಿ ಇಲಾಖೆ ಜುಲೈ 15ರಂದು ಪ್ರಸ್ತಾವನೆ ಕಳುಹಿಸಿದ್ದು, ಕೇವಲ 24 ಗಂಟೆಗಳಲ್ಲೇ ಕೇಂದ್ರ ಸರ್ಕಾರ ಅನುಮೋದನೆ ನೀಡಿ ಜುಲೈ 31ರವರೆಗೆ ನೋಂದಣಿ ಅವಧಿ ವಿಸ್ತರಿಸಿದೆ ಎಂದು ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದು, ಮಳೆ ಕೊರತೆಯಿಂದ ವಿಮೆ ಮಾಡಿಸಿಕೊಳ್ಳಲು ಸಾಧ್ಯವಾಗದ ರೈತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now