Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಾವ ಪುರುಷಾರ್ಥಕ್ಕೆ ಈ ಅಧಿವೇಶನ: ಕುಮಾರಸ್ವಾಮಿ ಗರಂ

Facebook
Twitter
Telegram
WhatsApp

 

ಬೆಂಗಳೂರು: ಅಧಿವೇಶನದಲ್ಲಿ ಚರ್ಚೆಗಿಂತ ಗಲಾಟೆ, ಗೊಂದಲಗಳೇ ಹೆಚ್ಚಾಗಿವೆ. ಇದು ಮಾಜಿ ಸಿಎಂ ಕುಮಾರಸ್ವಾಮಿಯವರ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಟ್ವಿಟ್ಟರ್ ನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

“ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಇರುವುದೇ ಪ್ರಜಾಪ್ರಭುತ್ವ.” ಅಮೆರಿಕದ ಮಾಜಿ ಅಧ್ಯಕ್ಷ ಅಬ್ರಾಹಂ ಲಿಂಕನ್‌ ಹೇಳಿದ ಈ ಮಾತು ಪ್ರಜಾಸತ್ತೆಯನ್ನು ಗೌರವಿಸುವ ಪ್ರತಿ ವ್ಯಕ್ತಿಗೂ ದಾರಿದೀಪ. ಆದರೆ, ಇವತ್ತು ಪ್ರಜಾಪ್ರಭುತ್ವವೆಂದರೆ; “ರಾಜಕೀಯದಿಂದ, ರಾಜಕೀಯಕ್ಕಾಗಿ, ರಾಜಕೀಯಕ್ಕೊಸ್ಕರವೇ” ಎನ್ನುವಂತಾಗಿದೆ.

ಕಳೆದೆರಡು ದಿನಗಳ ವಿಧಾನಮಂಡಲ ಕಲಾಪ ʼರಾಜಕೀಯ ಪ್ರತಿಷ್ಠೆʼಗೆ ಆಹುತಿಯಾಗಿದೆ. ಬೆಳಗಾವಿ ಕಲಾಪವನ್ನು ಬಲಿ ಪಡೆದ ಮೇಲೂ ರಾಜ್ಯಪಾಲರ ಭಾಷಣದ ಮೇಲೆ ಅಮೂಲ್ಯ ಚರ್ಚೆ ನಡೆಸಬೇಕಿದ್ದ ಈ ಸದನಕ್ಕೂ ಅದೇ ಚಾಳಿ ವಕ್ಕರಿಸಿದೆ.
ʼಪ್ರಜಾಪ್ರಭುತ್ವಕ್ಕೆ ಗ್ರಹಣʼ ಹಿಡಿಸುವ ಕೆಲಸ ನಡೆದಿದೆ.

ಹತ್ತು ನಿಮಿಷ ಧರಣಿ, ಆಮೇಲೆ ಕಲಾಪ ಮುಂದೂಡುವುದು; ಸದನ ನಡೆಯುವ ರೀತಿ ಇದೇನಾ? ಯಾವ ಪುರುಷಾರ್ಥಕ್ಕೆ ಈ ಅಧಿವೇಶನ? ದಿನಕ್ಕೆ1.5-2 ಕೋಟಿ ರೂ.ನಷ್ಟು ಪೋಲಾಗುವ ಜನರ ತೆರಿಗೆ ಹಣಕ್ಕೆ ಉತ್ತರದಾಯಿತ್ವ ಯಾರದ್ದು? ಅವರ ನಿರೀಕ್ಷೆಗಳನ್ನು ʼಕಾಲ ಕಸʼ ಮಾಡಿಕೊಂಡ ರಾಜಕೀಯ ಪ್ರತಿಷ್ಠೆಗೆ ಕೊನೆ ಇಲ್ಲವೆ?.

ಕೋವಿಡ್‌ʼನಿಂದ ಎರಡು ವರ್ಷ ಮಕ್ಕಳ ಶಿಕ್ಷಣ ಹಾಳಾಯಿತು. ಈಗ ಹಿಜಾಬ್‌, ಕೇಸರಿ ಶಾಲು ಗಲಾಟೆಯಿಂದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆಯೇ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಹೊಣೆ ಯಾರು? ಸಮಾಜಘಾತುಕ ಶಕ್ತಿಗಳನ್ನು ಹತ್ತಿಕ್ಕುವ ಜವಾಬ್ದಾರಿ ರಾಜಕೀಯ ಪಕ್ಷಗಳಿಗೆ ಇಲ್ಲವೇ?.

ಕಲಾಪಕ್ಕೆ ʼಜನಪರ ಅಜೆಂಡಾʼ ಇರಬೇಕೆ ವಿನಾ ʼಚುನಾವಣೆ ಅಜೆಂಡಾʼ ಅಲ್ಲ. ರಾಷ್ಟ್ರೀಯ ಪಕ್ಷಗಳಿಗೆ ಅಧಿವೇಶನವು ʼಮತ ಗಳಿಕೆಗೆ ಗುರಾಣಿʼ ಆಗಿರುವುದು ದುರದೃಷ್ಟಕರ. ತಮ್ಮ ಪ್ರತಿಷ್ಠೆಗೆ ಕಲಾಪವನ್ನು ಹಳಿತಪ್ಪಿಸಿ ಜನರ ನಿರೀಕ್ಷೆಗಳನ್ನು ಹೊಸಕಿ ಹಾಕುವುದು ʼರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣʼಕ್ಕೆ ನಿದರ್ಶನ ಎನ್ನುವುದು ನನ್ನ ಅಭಿಪ್ರಾಯ.

ಜನರು ಕಷ್ಟದಲ್ಲಿದ್ದಾರೆ. ಕೋವಿಡ್‌ʼನಿಂದ ಅವರ ಬದಕಿನ ಬವಣೆ ಹೆಚ್ಚಿ ರೋಸಿ ಹೋಗಿದ್ದಾರೆ. ಅವರು ರೊಚ್ಚಿಗೇಳುವ ಮುನ್ನ ಆಡಳಿತಾರೂಢ ಬಿಜೆಪಿ & ಅಧಿಕೃತ ಪ್ರತಿಪಕ್ಷ ಕಾಂಗ್ರೆಸ್‌ ಎಚ್ಚೆತ್ತುಕೊಂಡು ತಮ್ಮ ಜನವಿರೋಧಿ ನೀತಿ ಬದಲಿಸಿಕೊಳ್ಳಬೇಕು. ವಿಧಾನ ಕಲಾಪಕ್ಕೆ ಕುಣಿಕೆ ಬಿಗಿಯುವ ಹೀನ ರಾಜಕಾರಣ ನಿಲ್ಲಲಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಜ್ಯದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ..!

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನವಣೆ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ಇಂದು ಮತ ಎಣಿಕೆ ಕಾರ್ಯದಲ್ಲಿ ಸದ್ಯದ ಸ್ಥಿತಿಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಮೂರು ಕ್ಷೇತ್ರದಲ್ಲೂ ಕಾಂಗ್ರೆಸ್ ಮುಂದಿದೆ. ಸಿಪಿ ಯೋಗೀಶ್ವರ್ : 45,982

ಸಿಪಿ ಯೋಗೀಶ್ವರ್ ವರ್ಸಸ್ ನಿಖಿಲ್ ಕುಮಾರಸ್ವಾಮಿ: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಮುನ್ನಡೆ ..!

ಚನ್ನಪಟ್ಟಣ: ರಾಜ್ಯದಲ್ಲಿ ಇಂದು ಮೂರು ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಬೆಳಗ್ಗೆಯಿಂದಾನೇ ನಡೆಯುತ್ತಿದೆ. ಚನ್ನಪಟ್ಟಣ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿತ್ತು. ಎಲ್ಲರ ಚಿತ್ತ ಇಂದು ಅತ್ತ ಕಡೆಯೇ ನೆಟ್ಟಿದೆ‌. ಮತ ಎಣಿಕೆ ನಡೆಯುತ್ತಿದ್ದು, ಸದ್ಯದ

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

error: Content is protected !!