Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: 72 ವರ್ಷದ ದಾಂಪತ್ಯಕ್ಕೆ ಅಂತ್ಯ, ರಾಜಕೀಯ ಗಣ್ಯರಿಂದ ಸಂತಾಪ

---Advertisement---

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರು ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಚೆನ್ನಮ್ಮ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಚಿಕಿತ್ಸೆ ನೀಡುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಿರೇಹಳ್ಳಿಯಲ್ಲಿ ಜನಿಸಿದ್ದ ಚೆನ್ನಮ್ಮ ಅವರು 1954ರ ಮೇ 25ರಂದು ಎಚ್.ಡಿ. ದೇವೇಗೌಡ ಅವರನ್ನು ವಿವಾಹವಾಗಿದ್ದರು. 72 ವರ್ಷಗಳ ಸುದೀರ್ಘ ದಾಂಪತ್ಯ ಜೀವನ ನಡೆಸಿದ ಈ ದಂಪತಿಗೆ ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದಾರೆ.

ಚೆನ್ನಮ್ಮ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಮಣಿಪಾಲ್ ಆಸ್ಪತ್ರೆಗೆ ರಾಜಕೀಯ ಗಣ್ಯರು ಹಾಗೂ ಕುಟುಂಬಸ್ಥರು ಆಗಮಿಸುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಆಸ್ಪತ್ರೆಯಲ್ಲೇ ಇದ್ದು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಶಾಸಕ ಎಚ್.ಡಿ. ರೇವಣ್ಣ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಕುಟುಂಬದ ಸದಸ್ಯರು ಆಸ್ಪತ್ರೆಗೆ ಧಾವಿಸಿದ್ದಾರೆ.

ಜೀವನ ಸಂಗಾತಿಯನ್ನು ಕಳೆದುಕೊಂಡ ನೋವಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಭಾವುಕರಾದರು. ವ್ಹೀಲ್‌ಚೇರ್ ಮೂಲಕ ಆಸ್ಪತ್ರೆಗೆ ಬಂದ ಅವರು ಪತ್ನಿಯ ಅಂತಿಮ ದರ್ಶನದ ವೇಳೆ ಕಣ್ಣೀರಿಟ್ಟ ದೃಶ್ಯ ನೋಡುಗರ ಮನಕಲಕಿತು. ಈ ವೇಳೆ ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳೂ ಆಸ್ಪತ್ರೆಗೆ ಆಗಮಿಸಿ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ಸಂಸದ ಬಸವರಾಜ ಬೊಮ್ಮಾಯಿ ಅವರು ಚೆನ್ನಮ್ಮ ಅವರ ನಿಧನಕ್ಕೆ ಸಂತಾಪ ಸೂಚಿಸಿ, “ಅವರು ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಕುಟುಂಬದ ಸದಸ್ಯರು ಮುಂದಿನ ಅಂತ್ಯಕ್ರಿಯೆಯ ಕುರಿತು ಮಾಹಿತಿ ನೀಡಲಿದ್ದಾರೆ” ಎಂದು ಹೇಳಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಅವರು, “ಚೆನ್ನಮ್ಮ ಅವರ ಅಗಲಿಕೆ ನೋವುಂಟು ಮಾಡಿದೆ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವೇಗೌಡರ ಕುಟುಂಬಕ್ಕೆ ಕರುಣಿಸಲಿ” ಎಂದು ಪ್ರಾರ್ಥಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು, “ದೇವೇಗೌಡರ ಸಾರ್ವಜನಿಕ ಜೀವನದ ಯಶಸ್ಸಿನ ಹಿಂದೆ ಚೆನ್ನಮ್ಮ ಅವರ ತ್ಯಾಗ ಮತ್ತು ಬೆಂಬಲ ಮಹತ್ವದ್ದಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರಕಲಿ” ಎಂದು ಸಂತಾಪ ವ್ಯಕ್ತಪಡಿಸಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, “ಸರಳತೆ, ತಾಳ್ಮೆ ಮತ್ತು ಮಮತೆಯ ಪ್ರತಿರೂಪವಾಗಿದ್ದ ಚೆನ್ನಮ್ಮ ಅವರು ದೇವೇಗೌಡರ ಸಾರ್ವಜನಿಕ ಜೀವನಕ್ಕೆ ಭದ್ರ ಬುನಾದಿಯಾಗಿದ್ದರು. ಅವರ ಅಗಲಿಕೆ ಗೌಡರ ಕುಟುಂಬಕ್ಕೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟ” ಎಂದು ಶ್ರದ್ಧಾಂಜಲಿ ಸಲ್ಲಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now