ಸುದ್ದಿಒನ್, ಚಿತ್ರದುರ್ಗ, ಜುಲೈ. 18 : ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ದುಃಖವಾಗಿದೆ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಸಂತಾಪ ಸೂಚಿಸಿದ್ದಾರೆ.
“ಶ್ರೀಮತಿ ಚೆನ್ನಮ್ಮ ಅವರು ಸರಳತೆ, ಸೌಜನ್ಯ ಮತ್ತು ಕುಟುಂಬ ಮೌಲ್ಯಗಳಿಗೆ ಬದ್ಧತೆಯಿಂದ ಬದುಕಿದ ಮಹನೀಯರು. ತಮ್ಮ ಕುಟುಂಬದ ಬೆನ್ನೆಲುಬಾಗಿ ನಿಂತು ಹೆಚ್.ಡಿ. ದೇವೇಗೌಡ ಅವರ ಸಾರ್ವಜನಿಕ ಹಾಗೂ ರಾಜಕೀಯ ಜೀವನಕ್ಕೆ ಮೌನ ಶಕ್ತಿಯಾಗಿ ಅಪಾರ ಬೆಂಬಲ ನೀಡಿದವರು.
“ಭಗವಂತನು ಶ್ರೀಮತಿ ಚೆನ್ನಮ್ಮ ಅವರ ಆತ್ಮಕ್ಕೆ ಚಿರಶಾಂತಿ ಹಾಗೂ ಸದ್ಗತಿಯನ್ನು ಕರುಣಿಸಲಿ. ಈ ದುಃಖವನ್ನು ಭರಿಸುವ ಶಕ್ತಿ ಮಾಜಿ ಪ್ರಧಾನಿ ಶ್ರೀ ಹೆಚ್.ಡಿ. ದೇವೇಗೌಡರು, ಕೇಂದ್ರ ಸಚಿವರಾದ ಶ್ರೀ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಕುಟುಂಬದ ಎಲ್ಲ ಸದಸ್ಯರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಈ ದುಃಖದ ಸಂದರ್ಭದಲ್ಲಿ ದೇವೇಗೌಡ ಕುಟುಂಬದೊಂದಿಗೆ ನಾನೂ ಸಹ ಭಾಗಿಯಾಗಿದ್ದು, ನನ್ನ ಹೃತ್ಪೂರ್ವಕ ಸಂತಾಪವನ್ನು ಸಲ್ಲಿಸುತ್ತೇನೆ” ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









