Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ಮಣ್ಣಲ್ಲಿ ಮಣ್ಣಾದ `ಚೆನ್ನಮ್ಮ’ : ಸಕಲ ಸರ್ಕಾರಿ ಗೌರವಗಳೊಂದಿಗೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ!

---Advertisement---

ಹಾಸನ (ಜುಲೈ 20): ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆಯು ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಹಾಗೂ ಒಕ್ಕಲಿಗ ಸಂಪ್ರದಾಯದಂತೆ ನೆರವೇರಿತು.

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಶ್ರೀರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತಿಮ ವಿಧಿವಿಧಾನಗಳ ಬಳಿಕ ಒಕ್ಕಲಿಗ ಸಂಪ್ರದಾಯದಂತೆ ಚೆನ್ನಮ್ಮ ಅಂತ್ಯಕ್ರಿಯೆ ನಡೆಸಲಾಗಿದೆ.

ಈ ಭಾವಪೂರ್ಣ ವಿದಾಯದ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವರಾದ ಮನೋಹರ್ ಲಾಲ್ ಖಟ್ಟರ್, ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಪ್ರಲ್ಹಾದ್ ಜೋಶಿ ಸೇರಿದಂತೆ ದೇಶ ಮತ್ತು ರಾಜ್ಯದ ಹಲವು ಪ್ರಮುಖ ರಾಜಕೀಯ ಮುಖಂಡರು ಭಾಗವಹಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿದರು.

ಹೆಚ್.ಡಿ. ದೇವೇಗೌಡರ ಕುಟುಂಬಸ್ಥರು ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿದ ಬಳಿಕ, ಅವರ ಹುಟ್ಟೂರಾದ ಹರದನಹಳ್ಳಿ ಸಮೀಪದ ಮಾವಿನಕೆರೆ ಬೆಟ್ಟದ ತಪ್ಪಲಿನ ಕ್ಯಾತನಹಳ್ಳಿ ಬಳಿ ಇರುವ ಸ್ವಂತ ಜಮೀನಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ಈ ವೇಳೆ ದೇವೇಗೌಡರ ಕುಟುಂಬಸ್ಥರು, ಹಿತೈಷಿಗಳು ಹಾಗೂ ಸಹಸ್ರಾರು ಅಭಿಮಾನಿಗಳು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now