Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 20 : ಮಳೆ ಕೈಕೊಟ್ಟಿರುವ ಪರಿಣಾಮ ಜಿಲ್ಲೆಯನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

 

ದಾವಣಗೆರೆ ರಸ್ತೆಯಲ್ಲಿರುವ ಯೂನಿಯನ್ ಪಾರ್ಕ್‍ನಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಮುಂಗಾರು ಮಳೆಯನ್ನು ನಂಬಿ ರೈತರು ಸಾಲ ಮಾಡಿ ಬೀಜ ಗೊಬ್ಬರ ಖರೀಧಿಸಿ ಬಿತ್ತನೆ ಮಾಡಿದ್ದಾರೆ. ಮಳೆಯಿಲ್ಲದ ಪರಿಣಾಮ ಕಂಗಾಲಾಗಿರುವ ರೈತರನ್ನು ಸಾಲ ಮರುಪಾವತಿಸುವಂತೆ ಒತ್ತಾಯಿಸಬಾರದು. ಸರ್ಕಾರಿ ಗೋಮಾಳದಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಬೆಳೆ ಪರಿಹಾರ ನೀಡಿ ಚಿಕ್ಕಬೆನ್ನೂರು ಗ್ರಾಮದ ರಿ.ಸ.ನಂ. 69 ರ ಫಲಾನುಭವಿಗೆ ನಿವೇಶನ ಹಕ್ಕು ಪತ್ರ ಕೊಡಬೇಕು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಬೆಳೆ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವಂತೆ ಪ್ರತಿಭಟನಾನಿರತ ರೈತರು ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

 

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಪಿ.ಸೂರಪ್ಪ, ಜಿಲ್ಲಾ ಕಾರ್ಯದರ್ಶಿ ಶೇಖರಪ್ಪ ಡಿ.ಮೆದಕೇರಿಪುರ, ಉಪಾಧ್ಯಕ್ಷ ಎಂ.ಕೆ.ಚಂದ್ರಪ್ಪ,
ತಾಲ್ಲೂಕು ಅಧ್ಯಕ್ಷ ಅಜ್ಜಪ್ಪ ಚಿಕ್ಕಬೆನ್ನೂರು, ಉಪಾಧ್ಯಕ್ಷ ತಣಿಗೆಹಳ್ಳಿ ಕುಮಾರಸ್ವಾಮಿ, ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷ ಸಿದ್ದರಾಜು, ಎನ್.ಟಿ.ಶಿವಣ್ಣ, ವಸಂತಕುಮಾರ್, ಕಾಗಲಗೆರೆ ನಿಂಗರಾಜು, ಮಂಜುನಾಥ ಬೊಮ್ಮನಹಳ್ಳಿ, ಚಂದ್ರಪ್ಪ, ಪಾಪಣ್ಣ, ನಾಗರಾಜ, ರಾಜಪ್ಪ, ಮಧುಸೂದನ್, ತಿಪ್ಪೇಸ್ವಾಮಿ, ವಿರುಪಾಕ್ಷ, ರಾಮಪ್ಪ, ರಂಗಸ್ವಾಮಿ, ಚಂದ್ರಮ್ಮ, ಓಬಮ್ಮ, ಶಾರದಮ್ಮ, ಸರಸ್ವತಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now