Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ನ್ಯಾಯಬೆಲೆ ಅಂಗಡಿ ಚಲನಚಿತ್ರದ ಹೆಸರಲ್ಲಿ 150 ರೂ. ವಸೂಲಿ ಆರೋಪ: ಅಧಿಕಾರಿಯ ವಿರುದ್ಧ ಕ್ರಮಕ್ಕೆ ಕಾರ್ಮಿಕರ ಸಂಘದ ಒತ್ತಾಯ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 20 : ಸರ್ಕಾರಿ ನ್ಯಾಯಬೆಲೆ ಅಂಗಡಿ ಚಲನಚಿತ್ರದ ಪ್ರೀಮಿಯಂ ಷೋ ಜು.24 ರಂದು ಬಿಡುಗಡೆಗೊಳಿಸುತ್ತಿದ್ದು, ಜಿಲ್ಲಾಡಳಿತದ ಗಮನಕ್ಕೆ ಬಾರದೆ ಒಂದು ಟೋಕನ್‍ಗೆ 150 ರೂ.ಗಳಂತೆ ಮಾರಾಟ ಮಾಡುತ್ತಿದ್ದು, ಕರ್ತವ್ಯ ಲೋಪವೆಸಗಿರುವ ಆಹಾರ ಇಲಾಖೆಯ ಜಂಟಿ ನಿರ್ದೇಶಕರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಸಹಾಯಕರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

 

ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಪಡಿತರ ವಿತರಣೆಗೆ ಸಂಬಂಧಿಸಿದಂತೆ ಪಡಿತರ ಚೀಟಿದಾರರನ್ನು ಜಾಗೃತಿಗೊಳಿಸುವ ಉದ್ದೇಶದಿಂದ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಟೋಕನ್‍ಗಳನ್ನು ಮಾರಾಟ ಮಾಡಲಾಗುತ್ತಿದೆ. ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಸರ್ಕಾರಿ ನ್ಯಾಯಬೆಲೆ ಅಂಗಡಿ ಚಲನಚಿತ್ರದ ಪ್ರದರ್ಶನಕ್ಕೆ ಅನುವು ಮಾಡಿಕೊಡುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಆಯುಕ್ತರು ಪ್ರತಿ ಜಿಲ್ಲೆಯ ಜಂಟಿ ನಿರ್ದೇಶಕರು ಹಾಗೂ ಉಪ ನಿರ್ದೇಶಕರುಗಳಿಗೆ ಸೂಚಿಸಿದ್ದಾರೆಯೇ ವಿನಃ ಒಂದು ಟೋಕನ್‍ಗೆ 150 ರೂ. ಪಡೆಯಬೇಕೆಂದು ಸೂಚಿಸಿಲ್ಲ. ಹಾಗಾಗಿ ತಪ್ಪಿತಸ್ಥರ ವಿರುದ್ದ ಶಿಸ್ತು ಕ್ರಮ ಜರುಗಿಸುವಂತೆ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್ ಒತ್ತಾಯಿಸಿದರು.
ಗೌರವಾಧ್ಯಕ್ಷ ರಾಜಣ್ಣ ಕೆ, ಸಹ ಕಾರ್ಯದರ್ಶಿ ತಿಮ್ಮಯ್ಯ ಎಂ. ಇವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now