Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಟಿಟಿಸಿ: ಜುಲೈ 22ರಂದು ಉದ್ಯೋಗ ಮೇಳ

---Advertisement---

 

ಚಿತ್ರದುರ್ಗ. ಜುಲೈ. 20: ಚಿತ್ರದುರ್ಗದ ಹಳೇ ಬೆಂಗಳೂರು ರಸ್ತೆಯಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಆವರಣದಲ್ಲಿ ಇದೇ ಜುಲೈ 22ರಂದು ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

 

‘ವಿಪ್ರೋ ಕವಾಸಕಿ’ ಕಂಪನಿಯ ಸಹಯೋಗದೊಂದಿಗೆ ಈ ಉದ್ಯೋಗ ಮೇಳ ನಡೆಯುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ವಿವಿಧ ಸೌಲಭ್ಯಗಳೊಂದಿಗೆ ಉದ್ಯೋಗಾವಕಾಶ ಕಲ್ಪಿಸಲಾಗುವುದು ಉದ್ಯೋಗ ಮೇಳವು ಜುಲೈ 22 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3.30 ರವರೆಗೆ ಚಿತ್ರದುರ್ಗದ ಕುಂಚಿಗನಾಳ್‍ನಲ್ಲಿರುವ ಜಿಟಿಟಿಸಿ ಕಾಲೇಜು ಆವರಣದಲ್ಲಿ ನಡೆಯಲಿದೆ. ಡಿಪ್ಲೊಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್, ಆಟೋಮೊಬೈಲ್ ಇಂಜಿನಿಯರಿಂಗ್, ಟೂಲ್ ಇಂಜಿನಿಯರಿಂಗ್, ಪ್ರೆಸಿಷನ್ ಮ್ಯಾನುಫ್ಯಾಕ್ಚರಿಂಗ್ ಅಥವಾ ಇದಕ್ಕೆ ತತ್ಸಮಾನ ಕೋರ್ಸ್‍ಗಳನ್ನು ಮುಗಿಸಿದ ಅಭ್ಯರ್ಥಿಗಳು ಇದರಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ. 16,000 ಆಕರ್ಷಕ ವೇತನದೊಂದಿಗೆ ದಿನಕ್ಕೆ 2 ಬಾರಿ ಊಟ ಹಾಗೂ ಉಚಿತ ಸಾರಿಗೆ ಸೌಲಭ್ಯ ಸಿಗಲಿದೆ. ಇದರೊಂದಿಗೆ ಸರ್ಕಾರದ ಅಧಿಕೃತ ಪ್ರಮಾಣಪತ್ರವೂ ದೊರೆಯಲಿದ್ದು, ಬೆಂಗಳೂರಿನ ಕುಂಬಳಗೋಡು ಅಥವಾ ಬಿಡದಿಯಲ್ಲಿ ಕೆಲಸ ಮಾಡಲು ಅವಕಾಶವಿರುತ್ತದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಸಮಯಕ್ಕೆ ಹಾಜರಾಗಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9738465834, 9481866855, 9945616114 ಈ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಚಿದು ಚಿತ್ರದುರ್ಗ ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ