ಬೆಂಗಳೂರು.ಜುಲೈ.21: ಕರ್ನಾಟಕದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಐದು ದಿನಗಳ ಕಾಲ ರಾಜ್ಯದಾದ್ಯಂತ ಮಳೆ ಮಾರುತಗಳು ಮತ್ತಷ್ಟು ಚುರುಕುಗೊಳ್ಳಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು,ಇಂದಿನಿಂದ ಮಳೆಯ ಪ್ರಮಾಣ ತೀವ್ರಗೊಳ್ಳುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆಯಾಗಿ ಹಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಕರಾವಳಿ ತೀರದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಮಲೆನಾಡು ಹಾಗೂ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಪ್ರದೇಶಗಳಲ್ಲಿಯೂ ಜಲಧಾರೆ ಜೋರಾಗಿರಲಿದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗುವ ಮುನ್ಸೂಚನೆಯಿದ್ದು, ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಹವಾಮಾನದ ಏರುಪೇರಿನ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಕರಾವಳಿ ಭಾಗದ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








