Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಅರಿಸಿಣಗುಂಟೆ ಬಳಿ ಲಾರಿ- ಬೊಲೆರೊ ನಡುವೆ ಡಿಕ್ಕಿ : ಇಬ್ಬರು ಸ್ಥಳದಲ್ಲೇ ದಾರುಣ ಸಾವು!

---Advertisement---

ಹಿರಿಯೂರು.ಜುಲೈ.21: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಅರಸಿಣಗುಂಟೆ ಬಳಿ ಇಂದು ಲಾರಿ ಹಾಗೂ ಬೊಲೆರೊ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ವೇಗವಾಗಿ ಸಂಚರಿಸುತ್ತಿದ್ದ ಲಾರಿಯೊಂದು ಬೊಲೆರೊ ವಾಹನಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೊಲೆರೊ ವಾಹನದಲ್ಲಿದ್ದ ಇಬ್ಬರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now