Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ: ಬೆಳೆ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನ

---Advertisement---

 

ಚಿತ್ರದುರ್ಗ. ಜುಲೈ. 21: ಜಿಲ್ಲೆಯಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ’ಯಡಿ ಬೆಳೆ ವಿಮೆ ನೋಂದಣಿ ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಬೆಳೆವಿಮೆ ನೊಂದಣಿಗೆ ಜುಲೈ 31 ಕೊನೆಯ ದಿನವಾಗಿದೆ.

 

ಪ್ರಸಕ್ತ ಮುಂಗಾರು ಹಂಗಾಮು ಕ್ಷೀಣವಾಗಿರುವುದರಿಂದ ರೈತರು ಕೂಡಲೇ ಬೆಳೆ ವಿಮೆ ನೋಂದಣಿ ಮಾಡಿಕೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 3,02,505 ರೈತರಿದ್ದು, ಜುಲೈ 21ರ ಅಂಕಿಅಂಶಗಳ ಪ್ರಕಾರ ಇದುವರೆಗೆ 44,105 ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದಾರೆ. ತಾಲೂಕುವಾರು ನೋಂದಣಿ ವಿವರ ಇಂತಿದೆ. ಚಳ್ಳಕೆರೆಯಲ್ಲಿ 64,476 ರೈತರ ಪೈಕಿ 13,337 ರೈತರು, ಚಿತ್ರದುರ್ಗದಲ್ಲಿ 58,850 ರೈತರ ಪೈಕಿ 11,925 ರೈತರು, ಹಿರಿಯೂರಿನಲ್ಲಿ 55,745 ರೈತರ ಪೈಕಿ 7062 ರೈತರು, ಹೊಳಲ್ಕೆರೆಯಲ್ಲಿ 48,708 ರೈತರ ಪೈಕಿ 5,040 ರೈತರು, ಹೊಸದುರ್ಗದಲ್ಲಿ 52,278 ರೈತರ ಪೈಕಿ 2,815 ರೈತರು, ಹಾಗೂ ಮೊಳಕಾಲ್ಮೂರಿನಲ್ಲಿ 22,448 ರೈತರ ಪೈಕಿ 3,926 ರೈತರು ನೋಂದಾಯಿಸಿಕೊಂಡಿದ್ದಾರೆ.

Pಒಈಃಙ ಯೋಜನೆಯಡಿ ಬೆಳೆ ಸಾಲ ಪಡೆದ ರೈತರು ಅಂದಾಜು/ಉಪೇಕ್ಷಿತ ಬೆಳೆ ಬೆಳೆ ಬಿತ್ತನೆ ಆಧಾರದ ಮೇಲೆ ಬಿತ್ತನೆ ಪೂರ್ವದಲ್ಲೇ ಪಾಲ್ಗೊಳ್ಳಬಹುದು. ಬೆಳೆ ಸಾಲ ಪಡೆಯದ ರೈತರು ಬೆಳೆ ವಿಮೆಗೆ ನೋಂದಾಯಿಸಿದ ನಂತರ ಬೇರೆ ಬೆಳೆ ಬಿತ್ತನೆ ಮಾಡಿದ್ದಲ್ಲಿ ಹಾಗೂ ಬೆಳೆ ಸಾಲ ಪಡೆದ ರೈತರು ಸಾಲದ ಅರ್ಜಿಯಲ್ಲಿ ನಮೂದಿಸಿದ ಬೆಳೆ ಬದಲಾಗಿ ಬೇರೆ ಬೆಳೆ ಬಿತ್ತನೆ ಮಾಡಿದ್ದಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ನಿಗಧಿಪಡಿಸಿದ ಅವಧಿಯೊಳಗೆ ನೊಂದಾಯಿಸಿದ ಆರ್ಥಿಕ ಸಂಸ್ಥೆಗಳಲ್ಲಿ ಬಿತ್ತನೆ ದೃಢೀಕರಣ ಪತ್ರ ನೀಡಿ ವಿಮೆ ನೊಂದಾಯಿಸಿದ ಬೆಳೆಯನ್ನು ಬದಲಾಯಿಸತಕ್ಕದ್ದು. ಅಂತಹ ಸಂದರ್ಭದಲ್ಲಿ ಹೆಚ್ಚುವರಿ ವಿಮಾ ಕಂತಿನ ವ್ಯತ್ಯಾಸದ ಮೊತ್ತವನ್ನು ರೈತರು ಭರಿಸತಕ್ಕದ್ದು ಅಥವಾ ಹೆಚ್ಚುವರಿ ವಿಮಾ ಕಂತನ್ನು ಪಾವತಿಸಿದ್ದಲ್ಲಿ ರೈತರಿಗೆ ಸಂಸ್ಥೆಗಳಿಂದ ಮರು ಪಾವತಿ ಪಡೆಯಬಹುದು.

 

ಜಿಲ್ಲೆಯಲ್ಲಿ ಒಟ್ಟು ಸುಮಾರು 3 ಲಕ್ಷಕ್ಕಿಂತ ಹೆಚ್ಚಿನ ಜನ ರೈತರಿದ್ದು, ಉಳಿದ ರೈತರು ಈ ಕೂಡಲೇ ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ನೊಂದಾಯಿಸಿ ಪ್ರಯೋಜನ ಪಡೆದುಕೊಳ್ಳಲು ಜಿಲ್ಲೆಯ ರೈತರಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕೋರಿದ್ದಾರೆ.

ಆಸಕ್ತ ರೈತ ಬಾಂದವರು ನಿಗಧಿತ ದಿನಾಂಕದೊಳಗೆ ಬೆಳೆ ವಿಮೆಗೆ ನೋಂದಾವಣೆ ಮಾಡಲು ವಿನಂತಿಸಿದೆ. ಅಂತಿಮ ಸಮಯದಲ್ಲಿ ಜನದಟ್ಟಣೆಯಿಂದಾಗಿ ನೋಂದಾಣಿಯಲ್ಲಿ ತಪ್ಪುಗಳು ಸಂಭವಿಸಿ ವಿಮೆ ಪರಿಹಾರ ಬಾರದಿರುವ ಸಂಭವವಿರುತ್ತದೆ. ಇದಕ್ಕೆ ಅವಕಾಶ ಕೊಡದೇ ಸಕಾಲದಲ್ಲಿ ನೋಂದಾವಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕೋರಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now