Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS: ಮೋದಿ ರಾಜೀನಾಮೆಗೆ ಒತ್ತಾಯಿಸಿ ಪ್ರಧಾನಿ ನಿವಾಸದ ಮುಂದೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ

---Advertisement---

ದೆಹಲಿ.ಜುಲೈ.21: ಯುವ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಲೋಪಗಳನ್ನು ಎತ್ತಿಹಿಡಿದು ಕಾಂಗ್ರೆಸ್ ಉನ್ನತ ನಾಯಕರು ಲೋಕ್ ಕಲ್ಯಾಣ್ ಮಾರ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ. ವೇಣುಗೋಪಾಲ್, ಪವನ್ ಖೇರಾ ಸೇರಿದಂತೆ ಅನೇಕ ಹಿರಿಯ ನಾಯಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಪಟ್ಟು ಹಿಡಿದರು.

 

ರಾಹುಲ್ ಗಾಂಧಿ ಟ್ವೀಟ್ ಆಕ್ರೋಶ:
ಈ ಕುರಿತು ಟ್ವೀಟ್ (X) ಮಾಡಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

“ನಿನ್ನೆ ಯುವ ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯಕ್ಕೆ ಪ್ರಧಾನಿಯವರಿಂದ ಉತ್ತರದಾಯಿತ್ವ ಕೇಳಲು ನಾವು ಪ್ರಧಾನಿ ನಿವಾಸದತ್ತ ಪಾದಯಾತ್ರೆ ನಡೆಸಿದ್ದೇವೆ. ಈ ಸರ್ಕಾರಕ್ಕೆ ಯಾವುದೇ ಹೊಣೆಗಾರಿಕೆ ವಹಿಸಿಕೊಳ್ಳುವ ಮನಸ್ಸಿಲ್ಲ, ಅಥವಾ ಈ ವಿಷಯದ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸುವ ಇಚ್ಛೆಯೂ ಇಲ್ಲ. ಭಾರತದ ಯುವಕರ ಭವಿಷ್ಯವನ್ನು ಹಾಳುಗೆಡವುತ್ತಿರುವ ಪ್ರಧಾನಿ ಹಾಗೂ ಗೃಹ ಸಚಿವರು ತಕ್ಷಣವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು,” ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ಸಂಸತ್ತಿನ ಒಳಗೂ ಮತ್ತು ಹೊರಗೂ ಈ ವಿಷಯವಾಗಿ ಹೋರಾಟ ತೀವ್ರಗೊಳಿಸುವುದಾಗಿ ಕಾಂಗ್ರೆಸ್ ನಾಯಕರು ಎಚ್ಚರಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now