ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 21 : ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆರವರ 84 ನೇ ಜನ್ಮದಿನದ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಕೇಕ್ ಕತ್ತರಿಸಿ
ಸಂಭ್ರಮಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್ರವರು ಕೇಕ್ ಕತ್ತರಿಸಿ ಮಾತನಾಡುತ್ತ ಕರ್ನಾಟಕದವರಾಗಿರುವ ಮಲ್ಲಿಕಾರ್ಜುನ ಖರ್ಗೆರವರು ರಾಜ್ಯಸಭೆ ಸದಸ್ಯರಾಗಿ ಆಯ್ಕೆಗೊಂಡಿರುವುದಲ್ಲದೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯ. ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಇನ್ನು ಗಟ್ಟಿಯಾಗಿ ಬೆಳೆಯಬೇಕಾಗಿರುವುದರಿಂದ ಭಗವಂತ ಅವರಿಗೆ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್ಕುಮಾರ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ, ಮುದಸಿರ್ನವಾಜ್, ಸೈಯದ್ ಸೈಫುಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಕಾರ್ಯದರ್ಶಿ ಸೈಯದ್ ಗೌಸ್ ಅಹಮದ್, ವಸೀಂ ಬಡಾಮಕಾನ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









