Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 2ನೇ ಹಂತದಲ್ಲಿ 6,617 ಅತಿಥಿ ಶಿಕ್ಷಕರ ನೇಮಕ: ಸರ್ಕಾರ ಆದೇಶ

---Advertisement---

ಬೆಂಗಳೂರು.ಜುಲೈ.22: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಎರಡನೇ ಹಂತದಲ್ಲಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಅಥವಾ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಈ ನೇಮಕಾತಿ ಅನ್ವಯವಾಗಲಿದೆ.

2026-27ನೇ ಶೈಕ್ಷಣಿಕ ಸಾಲಿಗೆ ಒಟ್ಟು 40,000 ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಅನುಮತಿಸಿತ್ತು. ಪ್ರಥಮ ಹಂತದಲ್ಲಿ ಖಾಲಿ ಇದ್ದ 33,708 ಹುದ್ದೆಗಳ ಪೈಕಿ 30,337 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಇದೀಗ ಉಪ ನಿರ್ದೇಶಕರ (ಆಡಳಿತ) ಮನವಿಗಳನ್ನು ಪರಿಗಣಿಸಿ, ಲಭ್ಯವಿರುವ 9,663 ಹುದ್ದೆಗಳಲ್ಲಿ ಹೆಚ್ಚುವರಿಯಾಗಿ 6,617 ಅತಿಥಿ ಶಿಕ್ಷಕರನ್ನು ಪಿ.ಎಸ್.ಟಿ ಮತ್ತು ಜಿ.ಪಿ.ಟಿ ಖಾಲಿ ಹುದ್ದೆಗಳಿಗೆ ಎದುರಾಗಿ ನೇಮಕ ಮಾಡಿಕೊಳ್ಳಲು ಅನುಮತಿಸಲಾಗಿದೆ. ವಿದ್ಯಾರ್ಥಿ-ಶಿಕ್ಷಕರ ಅನುಪಾತದಂತೆ (PTR) ಜಿಲ್ಲಾವಾರು ಹಂಚಿಕೆ ಮಾಡಿ ಆದೇಶಿಸಲಾಗಿದೆ.

ಈ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಲೋಪದೋಷಗಳು ಸಂಭವಿಸದಂತೆ ಪಾರದರ್ಶಕವಾಗಿ ನಿಬಂಧನೆಗಳನ್ನು ಪಾಲಿಸಲು ಸೂಚಿಸಲಾಗಿದೆ. ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ ತಾಲೂಕು ಅಥವಾ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನೇ (BEO) ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತುಕ್ರಮ ಜರುಗಿಸುವುದಾಗಿ ಇಲಾಖೆ ಎಚ್ಚರಿಸಿದೆ. ಅಗತ್ಯವಿರುವ ಶಾಲೆಗಳಿಗೆ ತಾಲೂಕು ಹಂತದಲ್ಲಿ ತಕ್ಷಣವೇ ಹುದ್ದೆ ಹಂಚಿಕೆ ಆದೇಶ ಹೊರಡಿಸಿ, ವಿವರಗಳನ್ನು ಜಿಲ್ಲಾ ಉಪನಿರ್ದೇಶಕರು ಕ್ರೋಢೀಕರಿಸಿ ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now