ಬೆಂಗಳೂರು: ರಾಜಧಾನಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವಿನ ರಾಜಕೀಯ ಸಮರ ತಾರಕಕ್ಕೇರಿದ್ದು, ಪ್ರತಿಭಟನೆಯ ವೇಳೆ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆಮೊಟ್ಟೆ ಎಸೆದಿರುವ ಘಟನೆ ನಡೆದಿದೆ.
ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ಇಂದು ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಇದಕ್ಕೆ ಪ್ರತಿಯಾಗಿ ಬಿಜೆಪಿ ನಾಯಕರು ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದರು. ಈ ಸಂದರ್ಭದಲ್ಲಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ರಾಜ್ಯದ ಕೊತ್ವಾಲ್ ಶಿಷ್ಯಂದಿರಾದ ಸಿಎಂ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರ ನಾಯಕತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಶಾಸಕರ ಮೇಲೆ ಮೊಟ್ಟೆ, ರಾಡ್ ಹಾಗೂ ದೊಣ್ಣೆಗಳಿಂದ ದಾಳಿ ನಡೆಸಿರುವ ಘಟನೆ ತೀವ್ರ ಖಂಡನೀಯ.
ಪ್ರತಿಪಕ್ಷದ ಧ್ವನಿಯನ್ನು ಪ್ರಜಾಪ್ರಭುತ್ವದಲ್ಲಿ ಹೋರಾಟದಿಂದ ಎದುರಿಸಬೇಕೇ ಹೊರತು ಹಿಂಸೆಯಿಂದಲ್ಲ. ವಿರೋಧ… pic.twitter.com/IfDbZ9RK1F
— BJP Karnataka (@BJP4Karnataka) July 22, 2026
ನಮ್ಮ ನಾಯಕ ಆರ್. ಅಶೋಕ್ ಅವರು ಮುತ್ತಿಗೆಗೆ ಕರೆ ನೀಡಿದ್ದರು. ಅವರು ಕೆಪಿಸಿಸಿ ಕಚೇರಿ ಹತ್ತಿರವೇ ಇರಬಹುದು ಎಂದು ಭಾವಿಸಿದ ನನ್ನ ಡ್ರೈವರ್ ಅಲ್ಲೇ ಕಾರು ನಿಲ್ಲಿಸಿ ಇಳಿಯಲು ಹೇಳಿದ. ನಾನು ಕಾರಿನಿಂದ ಕೆಳಗಿಳಿಯುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ಓಡಿಸಿಕೊಂಡು ಬಂದು ನನ್ನ ಮೇಲೆ ಹಲ್ಲೆ ನಡೆಸಿ ಮೊಟ್ಟೆ ಎಸೆದರು ಎಂದು ಶಾಸಕ ಹರೀಶ್ ಪ್ರತಿಕ್ರಿಯೆ ನೀಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









