ಬೆಂಗಳೂರು.ಜುಲೈ.23: ರಾಜ್ಯದಲ್ಲಿ ರೌಡಿಸಂ ಹಾಗೂ ಸಮಾಜ ವಿರೋಧಿ ಚಟುವಟಿಕೆಗಳನ್ನು ತಡೆದು ಸಾರ್ವಜನಿಕರಿಗೆ ಸುರಕ್ಷಿತ ವಾತಾವರಣ ನಿರ್ಮಿಸಲು ರಾಜ್ಯ ಸರ್ಕಾರ ಅತ್ಯಂತ ಮಹತ್ವದ ಹೆಜ್ಜೆ ಇಟ್ಟಿದೆ. ಸಮಾಜದ ಶಾಂತಿ ಕದಡುವ ದುಷ್ಟ ಶಕ್ತಿಗಳಿಗೆ ಪೂರ್ಣವಿರಾಮ ಇಡಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದೆ.
ಈ ಉದ್ದೇಶಕ್ಕಾಗಿ ರಾಜ್ಯದ ಪ್ರತಿಯೊಂದು ಪೊಲೀಸ್ ವೃತ್ತದಲ್ಲೂ (Police Circle) ಅತ್ಯಂತ ಕಾರ್ಯನಿರತ ‘ವಿಶೇಷ ರೌಡಿ ನಿಗ್ರಹ ಪಡೆ’ಯನ್ನು (Special Anti-Rowdy Squad) ರಚಿಸಲಾಗಿದೆ.
ಕರ್ನಾಟಕದಾದ್ಯಂತ ರೌಡಿಸಂ ಮತ್ತು ಸಮಾಜ ವಿರೋಧಿ ಚಟುವಟಿಕೆಗಳಿಗೆ ಪೂರ್ಣವಿರಾಮ ಇಡಲು ರಾಜ್ಯ ಸರ್ಕಾರ ಬದ್ಧವಾಗಿದೆ.
ರಾಜ್ಯದ ಪ್ರತಿಯೊಂದು ಪೊಲೀಸ್ ವೃತ್ತದಲ್ಲೂ 'ವಿಶೇಷ ರೌಡಿ ನಿಗ್ರಹ ಪಡೆ' ರಚಿಸಲಾಗಿದೆ. ಸಮಾಜದ ಶಾಂತಿ ಕದಡುವವರ ವಿರುದ್ಧ 'ಶೂನ್ಯ ಸಹಿಷ್ಣುತೆ' ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ. ನಮ್ಮ ನಾಡಿನ ಪ್ರತಿಯೊಬ್ಬ… pic.twitter.com/vQ2qTSJCsy
— DIPR Karnataka (@KarnatakaVarthe) July 23, 2026

ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕೆಡಿಸುವವರ ಹಾಗೂ ಸಾರ್ವಜನಿಕರಿಗೆ ಕಿರುಕುಳ ನೀಡುವವರ ವಿರುದ್ಧ ‘ಶೂನ್ಯ ಸಹಿಷ್ಣುತೆ’ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ.
ಕಾನೂನನ್ನು ಕೈಗೆತ್ತಿಕೊಳ್ಳುವವರು ಎಷ್ಟೇ ಪ್ರಭಾವಿಯಾಗಿದ್ದರೂ ಅವರ ವಿರುದ್ಧ ದಾಕ್ಷಿಣ್ಯವಿಲ್ಲದೆ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಾಡಿನ ಪ್ರತಿಯೊಬ್ಬ ಪ್ರಜೆಯ ಸುರಕ್ಷತೆ, ನೆಮ್ಮದಿ ಮತ್ತು ಶಾಂತಿಯುತ ಜೀವನವೇ ಸರ್ಕಾರದ ಮೊದಲ ಆದ್ಯತೆಯಾಗಿದೆ.
ಈ ನೂತನ ನಿಗ್ರಹ ಪಡೆಯು ರೌಡಿ ಶೀಟರ್ಗಳು, ಅಕ್ರಮ ಚಟುವಟಿಕೆಗಳು ಮತ್ತು ಗೂಂಡಾವರ್ತನೆ ನಡೆಸುವವರ ಮೇಲೆ ಸದಾ ಕಣ್ಣಿಡಲಿದ್ದು, ಅಪರಾಧ ಕೃತ್ಯಗಳಿಗೆ ಸಂಪೂರ್ಣ ಬ್ರೇಕ್ ಹಾಕುವ ವಿಶ್ವಾಸವನ್ನು ವ್ಯಕ್ತಪಡಿಸಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










