ಬೆಂಗಳೂರು.ಜುಲೈ.24: ಕರ್ನಾಟಕ ಸರ್ಕಾರವು ರಾಜ್ಯದ ಅರ್ಹ ನಾಗರಿಕರಿಗೆ ‘ಶಾಶ್ವತ ನಿವಾಸ ಪ್ರಮಾಣಪತ್ರ’ (Permanent Residential Certificate – PRC) ನೀಡುವ ಪ್ರಕ್ರಿಯೆಯನ್ನು ಇನ್ನಷ್ಟು ಸರಳ, ಪಾರದರ್ಶಕ ಹಾಗೂ ಕಾನೂನುಬದ್ಧಗೊಳಿಸಿದೆ. ನಾಗರಿಕರಿಗೆ ಯಾವುದೇ ತೊಂದರೆಯಾಗದಂತೆ ಸುಲಭವಾಗಿ ಪ್ರಮಾಣಪತ್ರ ತಲುಪಿಸುವ ನಿಟ್ಟಿನಲ್ಲಿ ಈ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ನಾಗರಿಕರು ತಮಗೆ ಸಮೀಪದ ಸೇವಾ ಕೇಂದ್ರಗಳ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಬಹುದು:
ವಿಜಿಎಸ್ಕೆ (VJSK – ಗ್ರಾಮ ಪಂಚಾಯತಿ)
ಗ್ರಾಮ ಒನ್ (Grama One)
ಕರ್ನಾಟಕ ಒನ್ (Karnataka One)
ವಿಶೇಷ ಸೂಚನೆ: ಗುರುತಿನ ದೃಢೀಕರಣಕ್ಕಾಗಿ ಆಧಾರ್ ಆಧಾರಿತ ಇ-ಕೆವೈಸಿ (E-KYC) ಪ್ರಕ್ರಿಯೆಯನ್ನು ಕಡ್ಡಾಯಗೊಳಿಸಲಾಗಿದೆ.
ನಿಂತಿತು ಸುತ್ತಾಟ;
ಸರಳ-ಸುಲಭವಾಗಿ ಸಿಗುತ್ತಿದೆ ಶಾಶ್ವತ ನಿವಾಸ ಪ್ರಮಾಣಪತ್ರಕರ್ನಾಟಕ ಸರ್ಕಾರವು ಶಾಶ್ವತ ನಿವಾಸ ಪ್ರಮಾಣಪತ್ರ ಪಡೆಯುವ ಪ್ರಕ್ರಿಯೆಯನ್ನು ಅರ್ಹ ನಾಗರಿಕರಿಗೆ ಇನ್ನಷ್ಟು ಪಾರದರ್ಶಕ ಹಾಗೂ ಸುಲಭಗೊಳಿಸಿದ್ದು, ಗ್ರಾಮ ಪಂಚಾಯತಿ (VJSK), 'ಗ್ರಾಮ ಒನ್' ಅಥವಾ 'ಕರ್ನಾಟಕ ಒನ್' ಕೇಂದ್ರಗಳಲ್ಲಿ ಆಧಾರ್ ಆಧಾರಿತ ಇ-ಕೆವೈಸಿ ಮೂಲಕ… pic.twitter.com/m1yPBFIyk4
— DIPR Karnataka (@KarnatakaVarthe) July 22, 2026

ಶಾಶ್ವತ ನಿವಾಸ ಪ್ರಮಾಣಪತ್ರಕ್ಕೆ ಅರ್ಹತೆಗಳೇನು?
ಈ ಪ್ರಮಾಣಪತ್ರವನ್ನು ಪಡೆಯಲು ಸರ್ಕಾರ ಕೆಲವೊಂದು ಮುಖ್ಯ ಅರ್ಹತಾ ಮಾನದಂಡಗಳನ್ನು ವಿಧಿಸಿದೆ:
ರಾಜ್ಯದಲ್ಲಿ ವಾಸ್ತವ್ಯ: ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 10 ವರ್ಷಗಳ ಕಾಲ ಸಾಮಾನ್ಯ ನಿವಾಸಿಯಾಗಿ ವಾಸಿಸಿರಬೇಕು.
ಉದ್ಯೋಗದ ಆಧಾರ: ಅಥವಾ ಸರ್ಕಾರಿ/ಸಾರ್ವಜನಿಕ ಸಂಸ್ಥೆಯಲ್ಲಿ ಕನಿಷ್ಠ 7 ವರ್ಷಗಳ ಕಾಲ ಉದ್ಯೋಗದಲ್ಲಿರಬೇಕು.
(ಗಮನಿಸಿ: ಈ ಶರತ್ತುಗಳನ್ನು ಅರ್ಜಿದಾರರು ಅಥವಾ ಅವರ ತಂದೆ, ತಾಯಿ, ಪತಿ/ಪತ್ನಿ ಪೂರೈಸಿರಬೇಕಾಗುತ್ತದೆ).
ಬೇರೆ ರಾಜ್ಯದ ಶಾಶ್ವತ ನಿವಾಸಿಯಾಗಿರುವ ಯಾವುದೇ ವ್ಯಕ್ತಿಯು ಕರ್ನಾಟಕದಲ್ಲಿ ‘ಶಾಶ್ವತ ನಿವಾಸ ಪ್ರಮಾಣಪತ್ರ’ (PRC) ಪಡೆಯಲು ಅನರ್ಹರಾಗಿರುತ್ತಾರೆ.
ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಏಕರೂಪದ, ಪಾರದರ್ಶಕ ಮತ್ತು ಸಾರ್ವಜನಿಕರಿಗೆ ಅನುಕೂಲಕರವಾದ ಸೇವೆ ಒದಗಿಸುವ ಉದ್ದೇಶದಿಂದ ಈ ಮಾಹಿತಿ ನೀಡಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













