Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಸಭೆ ಗ್ರೀನ್ ಸಿಗ್ನಲ್!

---Advertisement---

ದೆಹಲಿ.ಜುಲೈ.24: ದೇಶಾದ್ಯಂತ ಪರೀಕ್ಷಾ ಅಕ್ರಮಗಳಿಗೆ ಶಾಶ್ವತ ತಡೆ ನೀಡಲು ಕೇಂದ್ರ ಸರ್ಕಾರ ಬೃಹತ್ ಹೆಜ್ಜೆ ಇಟ್ಟಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ಮಾರ್ಗ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ’ಗೆ ಅಂತಿಮ ಅನುಮೋದನೆ ದೊರೆತಿದೆ. ಈ ನೂತನ ಮಸೂದೆಯು ಪ್ರಶ್ನೆಪತ್ರಿಕೆ ಸೋರಿಕೆ ಮಾಡುವ ದಂಧೆಕೋರರ ವಿರುದ್ಧ ಅತ್ಯಂತ ಕಠಿಣ ಕ್ರಮಗಳಿಗೆ ಹಾದಿಮಾಡಿಕೊಡಲಿದ್ದು, ಅಪರಾಧಿಗಳಿಗೆ ಬರೋಬ್ಬರಿ 10 ವರ್ಷಗಳ ಕಾಲ ಜೈಲು ಶಿಕ್ಷೆ ಹಾಗೂ 1 ಕೋಟಿ ರೂಪಾಯಿವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ಸಂಸತ್ತಿನಲ್ಲಿ ಶೀಘ್ರವೇ ಮಂಡನೆಯಾಗುವ ನಿರೀಕ್ಷೆಯಿರುವ ಈ ಮಸೂದೆಯು ಪರೀಕ್ಷಾ ವ್ಯವಸ್ಥೆಯ ಮೇಲೆ ಅಭ್ಯರ್ಥಿಗಳು ಇಟ್ಟಿರುವ ನಂಬಿಕೆಯನ್ನು ಮರುಸ್ಥಾಪಿಸುವ ಗುರಿ ಹೊಂದಿದೆ.

ಇನ್ನೊಂದೆಡೆ, ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ತೀವ್ರ ಗದ್ದಲಕ್ಕೆ ಕಾರಣವಾಗಿದೆ. ಉಭಯ ಸದನಗಳಲ್ಲಿಯೂ ಪ್ರತಿಪಕ್ಷಗಳಾದ ‘ಇಂಡಿಯಾ’ ಮೈತ್ರಿಕೂಟದ ಸಂಸದರು ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಪಟ್ಟು ಹಿಡಿದರು. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿಪಕ್ಷಗಳ ತೀವ್ರ ಘೋಷಣೆ ಹಾಗೂ ಕಲಾಪಕ್ಕೆ ಅಡಚಣೆ ಉಂಟಾದ ಹಿನ್ನೆಲೆಯಲ್ಲಿ ಸದನದ ಕಲಾಪವನ್ನು ಪದೇ ಪದೇ ಮುಂದೂಡಬೇಕಾಯಿತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now