Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ 2 ದಿನಗಳ ಪ್ರವಾಸ: ಕಾರ್ಯಕ್ರಮಗಳ ಕಂಪ್ಲೀಟ್ ವಿವರ ಇಲ್ಲಿದೆ..!

---Advertisement---

ಚಿತ್ರದುರ್ಗ.ಜು.24: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜುಲೈ 25 ಹಾಗೂ 26 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲ್ಲಿದ್ದಾರೆ.

​ಜುಲೈ 25 ಶನಿವಾರ ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು‌ 10 ಗಂಟೆಗೆ ಹಿರಿಯೂರು ಪಟ್ಟಣದ ವೇದಾವತಿ ವಿಜ್ಞಾನ ಕಾಲೇಜು ಹಿಂಭಾಗದ ಕ್ರೀಡಾಂಗಣದಲ್ಲಿರುವ ಹೆಲಿಪ್ಯಾಡ್‌ಗೆ ಆಗಮಿಸುವರು.

ನಂತರ ರಸ್ತೆಯ ಮೂಲಕ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ನಡೆಸಲಿದ್ದಾರೆ.‌

ಬಳಿಕ ಮಧ್ಯಾಹ್ನ 12:30ಕ್ಕೆ‌ ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪ ಸಭಾಂಗಣದಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗ ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸುವರು.

ಸಂಜೆ 05 ಗಂಟೆಗೆ ಮುರುಘಾಮಠ ಆವರಣದ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ನಿರ್ಗಮಿಸುವರು.

​ಜುಲೈ 26 ಭಾನುವಾರ ಬೆಳಿಗ್ಗೆ 09:50ಕ್ಕೆ ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಆಯೋಜಿಸಿರುವ “ಕಾರ್ಗಿಲ್ ವಿಜಯ ದಿವಸ್” ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ನಂತರ ಬೆಳಿಗ್ಗೆ 10:30 ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು‌ 11:30 ಗಂಟೆಗೆ ಹಿರಿಯೂರು ಪಟ್ಟಣದ ವೇದಾವತಿ ವಿಜ್ಞಾನ ಕಾಲೇಜು ಹಿಂಭಾಗದ ಕ್ರೀಡಾಂಗಣದಲ್ಲಿರುವ ಹೆಲಿಪ್ಯಾಡ್‌ಗೆ ಆಗಮಿಸುವರು.

ತದನಂತರ ಹಿರಿಯೂರಿನ ನೆಹರೂ ಮೈದಾನದಲ್ಲಿ ಮಾಜಿ ಸಚಿವ ದಿವಂಗತ ಡಿ. ಸುಧಾಕರ್ ಅವರ ಭಾವಪೂರ್ಣ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 03 ಗಂಟಗೆ ಹಿರಿಯೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಹಿಂತಿರುಗಲಿದ್ದಾರೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಬಿ.ಎಸ್.ಶ್ರೀಧರ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now