Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಸುಗಮ ಪರೀಕ್ಷೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

---Advertisement---

ಬೆಂಗಳೂರು.ಜುಲೈ.24: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ವಿವಿಧ ವೃಂದದ ಪೊಲೀಸ್ ಕಾನ್ ಸ್ಟೇಬಲ್ ಖಾಲಿ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದೀಗ ಲಿಖಿತ ಪರೀಕ್ಷೆಗಳ ದಿನಾಂಕ ಮತ್ತು ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ.

ಈ ಲಿಖಿತ ಪರೀಕ್ಷೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮುಖಾಂತರ ನಡೆಸಲಾಗುತ್ತಿದ್ದು, ಪರೀಕ್ಷೆಗಳು ಯಾವುದೇ ಅಡಚಣೆ ಹಾಗೂ ಅಕ್ರಮಗಳಿಲ್ಲದೆ ಪಾರದರ್ಶಕವಾಗಿ ನಡೆಯಲು ಪೊಲೀಸ್ ಇಲಾಖೆಯು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಇಲಾಖೆಯು ಬಿಡುಗಡೆ ಮಾಡಿರುವ ಸುತ್ತೋಲೆಯಂತೆ, ಸಿವಿಲ್, ಸಶಸ್ತ್ರ, ಕೆ.ಎಸ್.ಆರ್.ಪಿ ಹಾಗೂ ಕೆ.ಎಸ್.ಐ.ಎಸ್.ಎಫ್ ಘಟಕಗಳ ಒಟ್ಟು ಸಾವಿರಾರು ಹುದ್ದೆಗಳಿಗೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳುಗಳಲ್ಲಿ ಲಿಖಿತ ಪರೀಕ್ಷೆಗಳು ನಡೆಯಲಿವೆ.

ಅನುಮೋದಿತ ವೇಳಾಪಟ್ಟಿಯ ಪ್ರಕಾರ, ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (ಉಳಿಕೆ ಮೂಲ ವೃಂದದ 3395 ಹುದ್ದೆಗಳು) ಹುದ್ದೆಗಳಿಗೆ 2026ರ ಆಗಸ್ಟ್ 2ರಂದು ಬೆಳಿಗ್ಗೆ 10:30ರಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಅದೇ ದಿನ ಮಧ್ಯಾಹ್ನ 02:30ರಿಂದ 04:00 ಗಂಟೆಯವರೆಗೆ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (ಸ್ಥಳೀಯ ವೃಂದ 371ಜೆ ಮೀಸಲಾತಿಯ 596 ಹುದ್ದೆಗಳು) ಪರೀಕ್ಷೆ ನಿಗದಿಯಾಗಿದೆ.

ತದನಂತರ, 2026ರ ಸೆಪ್ಟೆಂಬರ್ 6ರಂದು ಬೆಳಿಗ್ಗೆ 10:30ರಿಂದ 12:00 ಗಂಟೆಯವರೆಗೆ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಉಳಿಕೆ ಮೂಲ ವೃಂದದ 1421 ಹುದ್ದೆಗಳು) ಹಾಗೂ ಅದೇ ದಿನ ಮಧ್ಯಾಹ್ನ 02:30ರಿಂದ 04:00 ಗಂಟೆಯವರೆಗೆ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸ್ಥಳೀಯ ವೃಂದ 371ಜೆ ಮೀಸಲಾತಿಯ 179 ಹುದ್ದೆಗಳು) ಲಿಖಿತ ಪರೀಕ್ಷೆಗಳು ಜರುಗಲಿವೆ.

ಮುಂದುವರಿದು, 2026ರ ಸೆಪ್ಟೆಂಬರ್ 20ರಂದು ಬೆಳಿಗ್ಗೆ 10:30ರಿಂದ 12:00 ಗಂಟೆಯವರೆಗೆ ವಿಶೇಷ ಮೀಸಲು ಪೊಲೀಸ್ ಕಾನ್ಸ್ಟೇಬಲ್ (ಕೆಎಸ್ಆರ್ಪಿ ಉಳಿಕೆ ಮೂಲ ವೃಂದದ 1455 ಹುದ್ದೆಗಳು) ಮತ್ತು ಮಧ್ಯಾಹ್ನ 02:30ರಿಂದ 04:00 ಗಂಟೆಯವರೆಗೆ ಕೆಎಸ್ಆರ್ಪಿ ಹಾಗೂ ಕೆಎಸ್ಐಎಸ್ಎಫ್ ಮೂರು ವೃಂದಗಳ ಸ್ಥಳೀಯ ವೃಂದ 371ಜೆ ಮೀಸಲಾತಿಯ ಒಟ್ಟು 859 ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ.

ಪರೀಕ್ಷೆಯನ್ನು ಅತ್ಯಂತ ಸುರಕ್ಷಿತವಾಗಿ ನಡೆಸಲು ಇಲಾಖೆಯು ಬಿಗಿಯಾದ ಬಂದೋಬಸ್ತ್ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಡ್ಡಾಯಗೊಳಿಸಲಾಗಿದ್ದು, ಅಗತ್ಯವಿದ್ದಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗುತ್ತದೆ. ಪರೀಕ್ಷಾ ಕರ್ತವ್ಯದಲ್ಲಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮೊಬೈಲ್ ಫೋನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ವೈರ್ಲೆಸ್ ನಿಸ್ತಂತು ಸಾಧನಗಳ ಮೂಲಕ ಮಾತ್ರ ಸಂವಹನ ನಡೆಸಲು ಸೂಚಿಸಲಾಗಿದೆ.

ಅಭ್ಯರ್ಥಿಗಳ ತಪಾಸಣೆಗೆ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ದ್ವಾರ ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದ್ದು, ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು ಅಥವಾ ನಿಷೇಧಿತ ವಸ್ತುಗಳನ್ನು ಒಳಗೊಂಡಂತೆ ತೆಗೆದುಕೊಂಡು ಹೋಗುವುದನ್ನು ಕಟ್ಟುನಿಟ್ಟಾಗಿ ತಡೆಯಲಾಗುತ್ತದೆ. ಪರೀಕ್ಷಾ ಕೊಠಡಿಯ 100 ಮೀಟರ್ ಸುತ್ತಳತೆಯಲ್ಲಿ ಅಭ್ಯರ್ಥಿಗಳ ಬ್ಯಾಗ್ ಸೇರಿದಂತೆ ಯಾವುದೇ ವಸ್ತುಗಳು ಇರದಂತೆ ಕ್ರಮ ವಹಿಸಲು ಜಿಪಂ ಹಾಗೂ ಡಿಡಿಪಿಐ ಸಹಯೋಗದಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತದೆ.

ಪರೀಕ್ಷಾ ಅಕ್ರಮಗಳು, ವದಂತಿಗಳು ಹಾಗೂ ಸುಳ್ಳು ಸುದ್ದಿಗಳ ಪ್ರಸಾರವನ್ನು ತಡೆಯಲು ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ ವಹಿಸಲಾಗುವುದು. ಮುಂಚಿತವಾಗಿಯೇ ಶಂಕಿತ ವ್ಯಕ್ತಿಗಳು ಹಾಗೂ ಖಾಸಗಿ ಕೋಚಿಂಗ್ ಸೆಂಟರ್ಗಳ ಚಟುವಟಿಕೆಗಳ ಮೇಲೆಯೂ ಇಲಾಖೆ ಕಣ್ಣಿಟ್ಟಿರಲಿದೆ. ಕರ್ನಾಟಕ ಸಾರ್ವಜನಿಕ ಪರೀಕ್ಷೆ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನ್ಯಾಯದ ವಿಧಾನ ತಡೆಗಟ್ಟುವಿಕೆ) ಕಾಯ್ದೆ-2023ರ ಅಡಿಯಲ್ಲಿ ಅಕ್ರಮ ಎಸಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now