Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಬೀದಿಗಿಳಿದು ಸೂಕ್ತ ಉತ್ತರ ನೀಡಲಿದ್ದೇವೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ಎಂ.ಎಲ್.ಸಿ.ನವೀನ್ ಮುನ್ನೆಚ್ಚರಿಕೆ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ,ಜು. 24‌ : ದೇಶದಲ್ಲಿ ಕಾಂಗ್ರೆಸ್ ಆಡಳಿತದಲ್ಲಿರುವುದು ಕೇವಲ ಮೂರು ರಾಜ್ಯಗಳಲ್ಲಿ ಮಾತ್ರ, ಆದರೆ ಬಿಜೆಪಿ ಹಾಗೂ ಎನ್‍ಡಿಎ ಮೈತ್ರಿಕೂಟ 22 ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿದೆ. ಕರ್ನಾಟಕದಲ್ಲಿ ವಿರೋಧ ಪಕ್ಷದ ಶಾಸಕರಿಗೆ ಅವಮಾನ ಮಾಡಿದರೆ, ಬಿಜೆಪಿಗೂ 22 ರಾಜ್ಯಗಳಲ್ಲಿ ತಕ್ಕ ಉತ್ತರ ನೀಡುವ ಶಕ್ತಿಯಿದೆ ಎಂಬುದನ್ನು ಕಾಂಗ್ರೆಸ್ ನಾಯಕರು ಮರೆಯಬಾರದು ಎಂದು ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.

ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿಯ ಒನಕೆ ಓಬವ್ವ ವೃತ್ತದಲ್ಲಿ ಶುಕ್ರವಾರ ಕಾಂಗ್ರೆಸ್ ಕಚೇರಿ ಮುಂದೆ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಚಿತ್ರದುರ್ಗ ನಗರಮಂಡಲವತಿಯಿಂದ ನಡೆದ ಕಾಂಗ್ರೆಸ್ ಸರ್ಕಾರದ ಗೂಂಡಾ ವರ್ತನೆಯ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ಎರಡು ದಿನಗಳ ಹಿಂದೆ ಪ್ರತಿಭಟನೆ ವೇಳೆ ಬಿಜೆಪಿ ನಾಯಕರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಕಾಂಗ್ರೆಸ್ ನಾಯಕರ ಕುಮ್ಮಕ್ಕಿನಿಂದ ಹಲ್ಲೆ ನಡೆಸಲಾಗಿದೆ. ಬಿಜೆಪಿ ನಾಯಕರ ಮೇಲೆ ಹಲ್ಲೆ: ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿಯ ಎದುರು ಪ್ರತಿಭಟನೆ ನಡೆಸುತ್ತಿದ್ದಾಗ, ಕಾಂಗ್ರೆಸ್ ನಾಯಕರ ಕುಮ್ಮಕ್ಕಿನಿಂದ ಕಾರ್ಯಕರ್ತರು ಕದ್ದುಮುಚ್ಚಿ ಬಂದು ದಾಳಿ ನಡೆಸಿದ್ದಾರೆ. ಶಾಸಕ ಬಿ.ಪಿ. ಹರೀಶ್, ಕೆ.ಸಿ. ರಾಮಮೂರ್ತಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಅವರ ಮೇಲೆ ಮೊಟ್ಟೆ ಎಸೆಯುವ ಮೂಲಕ ಹಲ್ಲೆ ನಡೆಸಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ವಿರುದ್ಧ ಹೋರಾಟ ಮಾಡುವುದು ವಿರೋಧ ಪಕ್ಷದ ಹಕ್ಕಾಗಿದೆ. ಈ ಪ್ರತಿಭಟನಾ ಹಕ್ಕನ್ನು ತಡೆಯಲು ಅಥವಾ ಬೆದರಿಸಲು ಯಾರಿಗೂ ಅಧಿಕಾರವಿಲ್ಲ ಎಂದರು.

ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳನ್ನು “ಕೊತ್ವಾಲ್ ಶಿಷ್ಯಂದಿರು” ಎಂದು ಲೇವಡಿ ಮಾಡಿದ ಶಾಸಕರು, ಇವತ್ತು ರಾಜ್ಯದಲ್ಲಿ ಶಾಂತಿ ಕದಡಿ ರೌಡಿ ರಾಜ್ಯವನ್ನಾಗಿ ಪರಿವರ್ತಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿಯ ಜಂತರ್ ಮಂತರ್ ಚಳುವಳಿಯ ಪ್ರಸ್ತಾಪಿಸಿ ದೆಹಲಿಯಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಹೋರಾಟಕ್ಕೆ ತಿಂಗಳುಗಟ್ಟಲೆ ತಲೆಮರೆಸಿಕೊಂಡಿದ್ದ ರಾಹುಲ್ ಗಾಂಧಿ ಏಕಾಏಕಿ ಆಗಮಿಸಿ, ತಾನೇ ಹೋರಾಟದ ರೂವಾರಿ ಎಂಬಂತೆ ಪ್ರದರ್ಶಿಸಿಕೊಂಡಿದ್ದಾರೆ. ಪ್ರಧಾನಮಂತ್ರಿಗಳ ನಿವಾಸದ ಮುಂದೆಯೂ ಧರಣಿ ನಡೆಸಿ, ಆಡಳಿತದ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ.ದೇಶದಲ್ಲಿ ಕಾಂಗ್ರೆಸ್ ಆಡಳಿತದಲ್ಲಿರುವುದು ಕೇವಲ ಮೂರು ರಾಜ್ಯಗಳಲ್ಲಿ ಮಾತ್ರ, ಆದರೆ ಬಿಜೆಪಿ ಹಾಗೂ ಎನ್‍ಡಿಎ ಮೈತ್ರಿಕೂಟ 22 ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿದೆ. ಕರ್ನಾಟಕದಲ್ಲಿ ವಿರೋಧ ಪಕ್ಷದ ಶಾಸಕರಿಗೆ ಅವಮಾನ ಮಾಡಿದರೆ, ಬಿಜೆಪಿಗೂ 22 ರಾಜ್ಯಗಳಲ್ಲಿ ತಕ್ಕ ಉತ್ತರ ನೀಡುವ ಶಕ್ತಿಯಿದೆ ಎಂಬುದನ್ನು ಕಾಂಗ್ರೆಸ್ ನಾಯಕರು ಮರೆಯಬಾರದು ಎಂದು ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಎಚ್ಚರಿಸಿದರು.

ಕಾಂಗ್ರೆಸ್ ನಾಯಕರು ದೇಶ ವಿಭಜನೆ ಮಾಡುವ ಶಕ್ತಿಗಳು, ಉಮರ್ ಖಾಲಿದ್ ಅವರಂತಹ ವ್ಯಕ್ತಿಗಳು, ಖಾಲಿಸ್ತಾನಿ ಬೆಂಬಲಿತರು ಹಾಗೂ “ತುಕಡೆ ತುಕಡೆ ಗ್ಯಾಂಗ್” ಸದಸ್ಯರನ್ನು ಜಂತರ್ ಮಂತರ್‍ನಂತಹ ವೇದಿಕೆಗಳಲ್ಲಿ ಮುನ್ನೆಲೆಗೆ ತಂದು ರಾಜಕಾರಣ ಮಾಡುತ್ತಿದ್ದಾರೆ. ನೀಟ್ ಪರೀಕ್ಷೆಯ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಿ ಯುವಜನರನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಕೇಂದ್ರದಲ್ಲಿ ಬಿಜೆಪಿ ಆಡಳಿತಕ್ಕೆ ಬಂದು ಕಳೆದ 13 ವರ್ಷಗಳಲ್ಲಿ ಯಾವುದೇ ವಿರೋಧ ಪಕ್ಷದ ಹೋರಾಟವನ್ನು ಹತ್ತಿಕ್ಕುವ ಅಥವಾ ಅವರ ಸಂಸದರು-ಶಾಸಕರನ್ನು ತುಳಿಯುವ ಕೆಲಸ ಮಾಡಿಲ್ಲ. ಹೋರಾಟಕ್ಕೆ ಗೌರವ ನೀಡಿ ಸಹನೆಯಿಂದ ಆಲಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿಕೊಂಡು ಬಂದಿದೆ. ಬಿಜೆಪಿ ಕಾರ್ಯಕರ್ತರು ಲಕ್ಷಾಂತರ ಸಂಖ್ಯೆಯಲ್ಲಿದ್ದು, ಇಂತಹ ದೇಶವಿರೋಧಿ ಚಿಂತನೆಗಳನ್ನು ಸಹಿಸುವುದಿಲ್ಲ. ಕಾಂಗ್ರೆಸ್ ನಾಯಕರು ಪ್ರಚೋದನಕಾರಿ ನಡವಳಿಕೆಯನ್ನು ನಿಲ್ಲಿಸದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ.

ಕಾಂಗ್ರೆಸ್ ಪಕ್ಷವು ದೇಶವಿರೋಧಿ ಶಕ್ತಿಗಳ ಜೊತೆಗೂಡಿ ಅರಾಜಕತೆ ಸೃಷ್ಟಿಸುತ್ತಿರುವುದನ್ನು ಹಾಗೂ ಬಿಜೆಪಿ ನಾಯಕರ ಮೇಲೆ ನಡೆಸಿದ ಹಲ್ಲೆಯನ್ನು ತೀವ್ರವಾಗಿ ಖಂಡಿಸಿದ ರಾಜ್ಯದಲ್ಲಿ ಪ್ರಜಾಸತ್ತಾತ್ಮಕ ಹೋರಾಟಕ್ಕೆ ತಡೆ ನೀಡಿದರೆ ಬೀದಿಗಿಳಿದು ಸೂಕ್ತ ಉತ್ತರ ನೀಡುವುದಾಗಿ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಎಚ್ಚರಿಕೆ ನೀಡಿದರು.

ಈ ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ವೆಂಕಟೇಶ್ ಯಾದವ್, ಡಾ,ಮಂಜುನಾಥ್, ಶೈಲಜಾ ರೆಡ್ಡಿ,
ಕಾರ್ಯದರ್ಶಿ ಶ್ರೀಮತಿ ರೇಖಾ, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ದಗ್ಗೆ ಶಿವಪ್ರಕಾಶ್, ಭಾರ್ಗವಿ ದ್ರಾವಿಡ್, ಯಶವಂತ ನಗರಮಂಡಲ ಪದಾಧಿಕಾರಿಗಳು,ಮೋರ್ಚ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ,ಮೋರ್ಚ ಪದಾಧಿಕಾರಿಗಳು,ಮುಖಂಡರು ,ಕಾರ್ಯಕರ್ತರು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now