Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭಾರಿ ಮಳೆ ಸಾಧ್ಯತೆ : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲೆ,ಕಾಲೇಜುಗಳಿಗೆ ಇಂದು ರಜೆ

---Advertisement---

ಬೆಂಗಳೂರು.ಜುಲೈ.25: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಕರಾವಳಿ ಭಾಗಕ್ಕೆ ‘ಆರೆಂಜ್ ಅಲರ್ಟ್’ ನೀಡಿದೆ. ಈ ತೀವ್ರ ಮಳೆಯ ಹಿನ್ನೆಲೆಯಲ್ಲಿ ಜುಲೈ 25ರ ಶನಿವಾರದಂದು ಎರಡೂ ಜಿಲ್ಲೆಗಳ ಪ್ರಮುಖ ಶೈಕ್ಷಣಿಕ ಸಂಸ್ಥೆಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದು, ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಇದರ ಜೊತೆಗೆ ವಸತಿ ಶಾಲೆಗಳು, 12ನೇ ತರಗತಿವರೆಗಿನ ಪದವಿ ಪೂರ್ವ ಕಾಲೇಜುಗಳು, ಐಟಿಐ ಮತ್ತು ಡಿಪ್ಲೊಮಾ ಸಂಸ್ಥೆಗಳಿಗೂ ಈ ಆದೇಶ ಅನ್ವಯವಾಗಲಿದೆ.

ಮಳೆಯ ತೀವ್ರತೆಗೆ ಜನಜೀವನ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರೂ ಶನಿವಾರದಂದು ರಜೆ ಘೋಷಿಸಿ ಆದೇಶಿಸಿದ್ದಾರೆ. ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು, ಪಿಯು ಕಾಲೇಜು, ಡಿಪ್ಲೊಮಾ ಹಾಗೂ ಐಟಿಐ ಸಂಸ್ಥೆಗಳಿಗೆ ರಜೆ ಸಿಗಲಿದೆ. ಆದಾಗ್ಯೂ, ಈ ರಜೆಯು ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ. ಪದವಿ, ಸ್ನಾತಕೋತ್ತರ ಪದವಿ (PG) ಮತ್ತು ಇಂಜಿನಿಯರಿಂಗ್ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿವೆ ಎಂದು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ